ಉಡುಪಿ, ಜಿ. 4: ಸಗ್ರಿ ಚಕ್ರತೀರ್ಥ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಕಾಣಿಯೂರು ಮಠಾಧೀಶರಾದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ದೇವಸ್ಥಾನದ ತಂತ್ರಿಗಳಾದ ಕೆ.ಜಿ. ವಿಟ್ಠಲ ತಂತ್ರಿಯವರ ಪೌರೋಹಿತ್ಯದಲ್ಲಿ ಗುರುವಾರ ನೂತನ ಧ್ವಜಸ್ತಂಭ ಸ್ಥಾಪನೆ ನೆರವೇರಿಸಲಾಯಿತು.
ದೇವಸ್ಥಾನದ ಆಡಳಿತ ಮೊತ್ತೇಸರ ರುದ್ರಯ್ಯ ಆಚಾರ್ಯ, ಅಷ್ಟಬಂಧ ಬ್ರಹ್ಮಕಲಶ ಮತ್ತು ಅಭಿವೃದ್ಧಿ ಸಮಿತಿ ಅಧ್ಯಕ್ಷ ಸುಪ್ರಸಾದ್ ಶೆಟ್ಟಿ ಬೈಕಾಡಿ, ಕಟಪಾಡಿ ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತಸರ ಮುರಹರಿ ಕೆ. ಆಚಾರ್ಯ, ಕಾರ್ಯದರ್ಶಿ ರಮೇಶ್ ನಾಯ್ಡ್, ದಿನೇಶ್ ಅಮೀನ್, ಕೋಶಾಧಿಕಾರಿ ಆನಂದ ಶೇರಿಗಾರ್, ನಗರಸಭೆ ಸದಸ್ಯ ಗಿರಿಧರ ಆಚಾರ್ಯ, ದೇವಸ್ಥಾನದ ಆಡಳಿತ ಮಂಡಳಿ ಮತ್ತು ಅಭಿವೃದ್ಧಿ ಸಮಿತಿ ಸಮಿತಿ ಸದಸ್ಯರು, ಭಕ್ತರು ಉಪಸ್ಥಿತರಿದ್ದರು.