ಮುಲ್ಕಿ: ಉಡುಪಿ ಜಿಲ್ಲೆಯ ಶ್ರೀ ಕ್ಷೇತ್ರ ಶಂಕರಪುರದ ಏಕಜಾತಿ ಧರ್ಮಪೀಠದ ದ್ವಾರಕಾಮಯಿ ಮಠದ ಪೀಠಾಧೀಶ್ವರ ಶ್ರೀ ಸಾಯಿ ಈಶ್ವರ್ ಗುರೂಜಿ ರವರು ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಭೇಟಿ ನೀಡಿದರು.
ಈ ಸಂದರ್ಭ ಕ್ಷೇತ್ರದ ಅರ್ಚಕರಾದ ನರಸಿಂಹ ಭಟ್ ಅನುವಂಶಿಕ ಮೊಕ್ತೇಸರ ಹಾಗೂ ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು ಹಾಗೂ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ ರವರು ಗುರೂಜಿಯವರಿಗೆ ಪ್ರಸಾದ ನೀಡಿ ಕ್ಷೇತ್ರದ ವತಿಯಿಂದ ಗೌರವಿಸಿದರು.ಈ ಸಂದರ್ಭ ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಸುನಿಲ್ ಆಳ್ವ, ಮುಲ್ಕಿ ನಗರ ಪಂಚಾಯತ್ ಸದಸ್ಯ ಸತೀಶ್ ಅಂಚನ್, ಶೈಲೇಶ್ ಕುಮಾರ್, ಗೌತಮ್ ಜೈನ್ ಮುಲ್ಕಿ ಅರಮನೆ, ವಿಠಲ್ ಎನ್ ಎಂ ಮತ್ತಿತರರು ಉಪಸ್ಥಿತರಿದ್ದರು