ಸಜೀಪ ಮಾಗಣೆ ಶ್ರೀ ಮಿತ್ತಮಜಲು ಕ್ಷೇತ್ರ ಮೂರು ಗೋಪುರಗಳ ಲೋಕಾರ್ಪಣೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳ ಸಿದ್ಧತಾ ಸಭೆ ಶ್ರೀ ಕ್ಷೇತ್ರದಲ್ಲಿ ಸೋಮವಾರದಂದು ಜರಗಿತು. ಮಾಗಣೆಯ ಎಲ್ಲಾ ಧಾರ್ಮಿಕ ಸಾಂಸ್ಕೃತಿಕ ಸಾಮಾಜಿಕ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿ ಎರಡು ದಿನದ ಕಾರ್ಯಕ್ರಮ ಯಶಸ್ವಿಗೊಳಿಸಲು ಸಕಲ ಸಿದ್ಧತೆಗಳ ಬಗ್ಗೆ ಚರ್ಚಿಸಲಾಯಿತು. ಹೊರೆ ಕಾಣಿಕೆ ಹಸಿರು ವಾಣಿ ಮೆರವಣಿಗೆ ಸಾಗುವ ರಸ್ತೆಯುದ್ಧಕ್ಕೂ ತಳಿರು ತೋರಣಗಳಿಂದ ಅಲಂಕರಿಸಲು ಸ್ಥಳೀಯ ಸಂಘ ಸಂಸ್ಥೆಗಳು ಜವಾಬ್ದಾರಿ ವಹಿಸಿಕೊಂಡರು ಸಜೀಪ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ಮಾತನಾಡಿ ಶ್ರೀ ದೈವಂಗಳು ಶ್ರೀ ಉಳ್ಳಾಲ್ದಿ ಶ್ರೀ ನಾಲ್ಕೈತಾಯ ಹಾಗೂ ಪರಿವಾರದ ದೈವಗಳ ಕ್ಷೇತ್ರದ ಜೀರ್ಣೋದ್ಧಾರದ ಹಲವು ಶತಮಾನಗಳಿಗೊಮ್ಮೆ ಜರಗುವ ಪುಣ್ಯ ಕಾರ್ಯದಲ್ಲಿ ಎಲ್ಲರೂ ಭಾಗವಹಿಸಿ ಸಿರಿಮುಡಿ ಗಂಧ ಪ್ರಸಾದ ಸ್ವೀಕರಿಸುವಂತೆ ವಿನಂತಿಸಿದರು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ವಿವೇಕ್ ಶೆಟ್ಟಿ ನಗ್ರೀ ಗುತ್ತು ಮಾತನಾಡಿ ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಜರಗುವ ಹೊರೆ ಕಾಣಿಕೆ ಮೆರವಣಿಗೆ ಅನ್ನದಾನ ಹಾಗೂ ಸ್ವಚ್ಛತಾ ಕಾರ್ಯಕ್ರಮಗಳಲ್ಲಿ ಎಲ್ಲಾ ಸಂಘ ಸಂಸ್ಥೆಯವರು ಸ್ವಯಂಸೇವೆಯಿಂದ ಸೇವೆ ಸಲ್ಲಿಸಲು ವಿನಂತಿಸಿದರು. ಮುಳ್ನಂಜ ವೆಂಕಟೇಶ್ವರ ಭಟ್ ಜಯ ಶಂಕರ ಬಾಸ್ರೀ ತಾಯ ಪಾಲ ಮಂಟಮೇ ಸಂಸಾರ ಅಜಿತ್ ಜೈ ನಕಾಂತಡಿ ಗುತ್ತು ಶಿವಪ್ರಸಾದ್ ಶೆಟ್ಟಿ ಬಿಜಂದಾರು ಗುತ್ತು ಶಿವರಾಮ ಭಂಡಾರಿ ನಗ್ರೀ ಗುತ್ತು ಜಯರಾಮ ಶೆಟ್ಟಿ ಎಸ್ ಶ್ರೀಕಾಂತ ಶೆಟ್ಟಿ ಕು oಜ್ಞ ಪೂಜಾರಿ ಯಾನೆ ದಯಾನಂದ ಪೂಜಾರಿ ಯಶವಂತ ದೇರಾಜೆ ಗುತ್ತು ಮೊದಲಾದವರು ಉಪಸ್ಥಿತರಿದ್ದರು ಶಿವಪ್ರಸಾದ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.