Saturday, January 18, 2025
Homeಬಂಟ್ವಾಳಸಜೀಪ ಮೂಡ: ಸರಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಪ್ರತಿಭಾ, ಪುರಸ್ಕಾರ ಕಾರ್ಯಕ್ರಮ

ಸಜೀಪ ಮೂಡ: ಸರಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ಪ್ರತಿಭಾ, ಪುರಸ್ಕಾರ ಕಾರ್ಯಕ್ರಮ

ಬಂಟ್ವಾಳ: ಸರಕಾರಿ ಪದವಿ ಪೂರ್ವ ಕಾಲೇಜು ಸಜೀಪ ಮೂಡ ಇದರ ವಾರ್ಷಿಕೋತ್ಸವ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಸೋಮವಾರದಂದು ಎಸ್ ಶ್ರೀಕಾಂತ್ ಶೆಟ್ಟಿ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಜರುಗಿತು.

ಕಾಲೇಜು ಪ್ರಾಚಾರ್ಯರಾದ ಸುರೇಶ್ ಬಿ. ಐತಾಳ ಸರ್ವರನ್ನು ಸ್ವಾಗತಿಸಿ ವಿದ್ಯಾರ್ಥಿಗಳು ಆದರ್ಶ ಗುಣಗಳನ್ನು ಮೈಗೂಡಿಸಿಕೊಂಡು ಉತ್ತಮ ನಾಗರಿಕರಾಗಿ ರೂಪಗೊಳ್ಳುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಬಹುಮಾನ ನೀಡಿ ಗೌರವಿಸಲಾಯಿತು.

ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಸಜಿಪ ಮಾಗಣೆ ತಂತ್ರಿ ಎಂ ಸುಬ್ರಹ್ಮಣ್ಯ ಭಟ್ ವಿದ್ಯಾರ್ಥಿಗಳು ಶಿಸ್ತು ಸಂಯಮ ಶ್ರದ್ಧೆ ವಿನಯ ತಾಳ್ಮೆಯಿಂದ ಒಳ್ಳೆಯ ವಿದ್ಯೆ ಕಲಿತು ಹೆತ್ತವರಿಗೆ ಹಾಗೂ ಕಲಿತ ಶಿಕ್ಷಣ ಸಂಸ್ಥೆಗೆ ಒಳ್ಳೆಯ ಹೆಸರನ್ನು ತರುವಂತೆ ವಿದ್ಯಾರ್ಥಿಗಳಿಗೆ ಹಿತವಚನ ನೀಡಿದರು.

ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರಾದ ವಿಶ್ವನಾಥ ಕೊಟ್ಟಾರಿ ಸುರೇಶ್ ಶೆಟ್ಟಿ ಉಪನ್ಯಾಸಕರಾದ ಬಾಲಕೃಷ್ಣ ಎನ್. ವಿ .ಗಾಯತ್ರಿ, ಭಾರತಿ, ಯಶೋಧಾ, ಸಿಂಧುಜ, ಸ್ಪೂರ್ತಿ, ಸುಂದರಿ, ಶೋಭಾ, ಬಾಲಕೃಷ್ಣ ನಾಯಕ್, ಸಿಬ್ಬಂದಿಗಳಾದ ಲತಾ, ಸಂಜೀವ ಪೂಜಾರಿ ಹಾಗೂ ಪೋಷಕರು ಉಪಸ್ಥಿತರಿದ್ದರು. ವಾರ್ಷಿಕೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಂದ ವಿವಿಧ ವಿನೋದವಳಿ ನೆರವೇರಿತು.

RELATED ARTICLES
- Advertisment -
Google search engine

Most Popular