ಬಂಟ್ವಾಳ: ಇಲ್ಲಿನ ಸಜಿಪನಡು ಗ್ರಾಮದ ಕಂಚಿನಡ್ಕ ಎಂಬಲ್ಲಿ ಒಂದೇ ಸಮುದಾಯಕ್ಕೆ ಸೇರಿದ ಪ್ರಿಯತಮೆ ನೋಡಲು ಶನಿವಾರ ಮಧ್ಯರಾತ್ರಿ ಬಂದಿದ್ದ ಪ್ರಿಯಕರನನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ವೀಡಿಯೋ ವೈರಲ್ ಆಗಿದ್ದು, ಯುವತಿ ಮನೆಯವರು ಮತ್ತು ಸ್ಥಳೀಯರು ಸೇರಿ ಪ್ರಿಯಕರನಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.