ಸಜಿಪನಡು ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಷಷ್ಠಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0
7

ಸಜಿಪನಡು ಶ್ರೀ ಕ್ಷೇತ್ರದ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿಸೆಂಬರ್ 14 ಮತ್ತು 15ರಂದು ನಡೆಯಲಿರುವ ಸುಬ್ರಹ್ಮಣ್ಯ ಷಷ್ಠಿ ಹಾಗೂ ವರ್ಷಾವಧಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಸಜೀಪ ಮಾಗಣೆ ತಂತ್ರಿ ಎಂ. ಸುಬ್ರಹ್ಮಣ್ಯ ಭಟ್ ಅವರು ಶ್ರೀ ದೇವರಲ್ಲಿ ಪ್ರಾರ್ಥಿಸಿ ಬಿಡುಗಡೆಗೊಳಿಸಿದರು.

ಜಾತ್ರಾ ಮಹೋತ್ಸವದ ಅಂಗವಾಗಿ ಭಜನಾ ಕಾರ್ಯಕ್ರಮ, ಯಕ್ಷಗಾನ ತಾಳಮದ್ದಳೆ, ಭರತನಾಟ್ಯ, ಅನ್ನದಾನ ಹಾಗೂ ದೇವರ ಬಲಿ ಉತ್ಸವ ಸೇರಿದಂತೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳ್ಳುಂಜ ವೆಂಕಟೇಶ್ವರ ಭಟ್, ಅರ್ಚಕ ಗಣಪತಿ ಮಹಾಬಲೇಶ್ವರ ಭಟ್, ಟ್ರಸ್ಟ್ ಅಧ್ಯಕ್ಷ ಕೆ. ರಾಧಾಕೃಷ್ಣ ಆಳ್ವ, ಜಿ. ರಾಮಕೃಷ್ಣ ಭಟ್, ಸಮಿತಿಯ ಪ್ರಮುಖರಾದ ಪ್ರವೀಣ್ ಭಂಡಾರಿ, ಹರೀಶ್ ಬಂಗೇರ, ರೇವತಿ, ಬಾಬು ಪೂಜಾರಿ, ವಿಠ್ಠಲ ಅಮೀನ್, ಪುರುಷೋತ್ತಮ ನಾಯ್ಕ, ಗೀತಾ ನಾಯಕ್, ಸುಧಾಕರ ಕೆ.ಟಿ., ಕಿಶನ್ ಸೇಣವ, ಸೋಮನಾಥ ಮೊದಲಾದವರು ಉಪಸ್ಥಿತರಿದ್ದರು.