ಬಂಟ್ವಾಳ : ಮಾದಕ ವಸ್ತು ಸೇವಿಸಿ ಅನುಚಿತವಾಗಿ ವರ್ತಿಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಮೂವರನ್ನು ಬಂಧಿಸಿದ ಘಟನೆ ಸಜಿಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ನಡೆದಿದೆ.
ಬಂಧಿತ ಆರೋಪಿಗಳನ್ನು ಬಂಟ್ವಾಳ ತಾಲೂಕು ಸಜಿಪಮುನ್ನೂರು ಗ್ರಾಮದ ನಿವಾಸಿ ಮಹಮ್ಮದ್ ತೌಸೀಫ್ (26), ಮೂಲತಃ ಪುದು ಗ್ರಾಮದ ನಿವಾಸಿ, ಪ್ರಸ್ತುತ ಪಾಣೆಮಂಗಳೂರು ಗ್ರಾಮದಲ್ಲಿ ವಾಸ್ತವ್ಯ ಹೊಂದಿರುವ ಜಾಫರ್ ಶರೀಫ್ ಹಾಗೂ ಉಳ್ಳಾಲ ತಾಲೂಕು ಮಂಜನಾಡಿ ನಾಟೆಕಲ್ ಗ್ರಾಮದ ನಿವಾಸಿ ಮಹಮ್ಮದ್ ಬಶೀರ್ ಎಂದು ಹೆಸರಿಸಲಾಗಿದೆ.

