ಸಾಲಿಗ್ರಾಮ ಗಣೇಶ್ ಶೆಣೈಯವರಿಗೆ “ಇಂಟರ್ ನ್ಯಾಷನಲ್ ಸ್ಟಾರ್ ಆವಾರ್ಡ್” ಪ್ರಶಸ್ತಿ ಪ್ರಧಾನ

0
29


ದಾವಣಗೆರೆ: ರಾಯಚೂರಿನ ಬೆಳಕು ಸಾಹಿತ್ಯ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್ವತಿಯಿಂದ ಹುಬ್ಬಳ್ಳಿಯಲ್ಲಿ ಸವಾಯಿ ಗಂಧರ್ವ ಕಲಾ ಮಂದಿರದಲ್ಲಿ ಜುಲೈ 12 ರಂದು ನಡೆಯುವ ಬೆಳಕು ಸಮ್ಮೇಳನ ಸಮಾರಂಭದಲ್ಲಿ ದಾವಣಗೆರೆಯ ಸಾಲಿಗ್ರಾಮ ಗಣೇಶ್ ಶೆಣೈಯವರನ್ನು ಅವರ ಸಾಂಸ್ಕೃತಿಕ ಸಾಧನೆಯನ್ನು ಗುರುತಿಸಿ “ಇಂಟರ್ ನ್ಯಾಷನಲ್ ಸ್ಟಾರ್ ಆವಾರ್ಡ್” ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಬೆಳಕು ಸಂಸ್ಥೆಯ ಸಂಸ್ಥಾಪಕರಾದ ಅಣ್ಣಪ್ಪ ಮೇಟಿಗೌಡ ತಿಳಿಸಿದ್ದಾರೆ.
ವಾಣಿಜ್ಯ ನಗರಿ ದಾವಣಗೆರೆಯನ್ನು ಕಳೆದ ನಾಲ್ಕು ದಶಕಗಳಿಂದ ನಿರಂತರವಾಗಿ ಕಠಿಣ ಪರಿಶ್ರಮದಿಂದ ಕಲೆ, ಸಾಹಿತ್ಯ, ಸಂಗೀತ, ಯಕ್ಷಗಾನ ಸೇರಿದಂತೆ ಸಾಂಸ್ಕೃತಿಕ ನಗರಿಯಾಗಿ ಪರಿವರ್ತಿಸಿದ ಶೆಣೈಯವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಬೆಳಕು ಸಂಸ್ಥೆಯ ಪದಾಧಿಕಾರಿಗಳು ಪ್ರಕಟಿಸಿದ್ದಾರೆ.
ದಾವಣಗೆರೆಯ ಕಲಾಕುಂಚ, ಕಾವ್ಯಕುಂಚ, ಯಕ್ಷರಂಗ, ಕಲಾಕುಂಚ ಮಹಿಳಾ ವಿಭಾಗ, ಸಿನಿಮಾಸಿರಿ, ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ, ಬಿಚ್ಕತ್ತಿ ಕುಟುಂಬ, ಕಲಾಸಿರಿ ಸಂಸ್ಥೆ, ಕರ್ನಾಟಕ ಸಗಮ ಸಂಗೀತ ಪರಿಷತ್, ಕನ್ನಡ ಸಾಹಿತ್ಯ ಪರಿಷತ್, ಕರಾವಳಿ ಮಿತ್ರ ಮಂಡಳಿ, ಶ್ರೀ ಗಾಯಿತ್ರಿ ಪರಿವಾರ, ಕಲಾಕುಂಚದ ವಿವಿಧ ಶಾಖೆಗಳು, ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಮುಂತಾದ ಸಂಸ್ಥೆಗಳ ಸರ್ವ ಸದಸ್ಯರು, ಪದಾಧಿಕಾರಿಗಳು ಅಭಿಮಾನದಿಂದ ಅಭಿನಂದಿಸಿ ಕಲಾಕುಂಚದ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here