Monday, December 2, 2024
HomeUncategorizedಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಸಾಲಿಗ್ರಾಮ ಗಣೇಶ್ ಶೆಣೈ ಆಯ್ಕೆ

ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ ಮುಖ್ಯ ಅತಿಥಿಗಳಾಗಿ ಸಾಲಿಗ್ರಾಮ ಗಣೇಶ್ ಶೆಣೈ ಆಯ್ಕೆ


ದಾವಣಗೆರೆ: ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಕೇರಳ ರಾಜ್ಯ ಘಟಕದ ಆಶ್ರಯದಲ್ಲಿ ನವೆಂಬರ್ ೧೦ ರಂದು ಭಾನುವಾರದಂದು ಕಾಸರಗೋಡಿನ ಕನ್ನಡ ಗ್ರಾಮದಲ್ಲಿ ನಡೆಯಲಿರುವ ಪ್ರಥಮ ಕೇರಳ ರಾಜ್ಯ ಮಕ್ಕಳ ಸಾಹಿತ್ಯ ಸಮ್ಮೇಳನ, ಕೇರಳ-ಕರ್ನಾಟಕ ಮಕ್ಕಳ ಉತ್ಸವ ಸಮಾರಂಭಕ್ಕೆ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಯಕ್ಷರಂಗದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈಯವರನ್ನು ಮುಖ್ಯ ಅತಿಥಿಗಳಾಗಿ ಆಯ್ಕೆ ಮಾಡಲಾಗಿದೆ ಎಂದು ಕೇರಳ ರಾಜ್ಯ ಘಟಕದ ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶಿವರಾಮ ಕಾಸರಗೋಡು ತಿಳಿಸಿದ್ದಾರೆ.
ಕನ್ನಡ ರಾಜ್ಯೋತ್ಸವದ ಈ ಅಪರೂಪ ಪ್ರಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನಕ್ಕೆ ಮಕ್ಕಳು, ಪೋಷಕರು, ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಮಕ್ಕಳ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕಾಗಿ ಈ ಪರಿಷತ್ತಿನ ಕರ್ನಾಟಕ ರಾಜ್ಯಾಧ್ಯಕ್ಷರಾದ ಸಿ.ಎನ್.ಅಶೋಕ್ ವಿನಂತಿಸಿದ್ದಾರೆ.

RELATED ARTICLES
- Advertisment -
Google search engine

Most Popular