ದಾವಣಗೆರೆ: ವಿಜಯನಗರ ಜಿಲ್ಲೆಯ ಕಡಲಬಾಳಿನ ಶ್ರೀ ಸುಜ್ಞಾನ ಪೀಠ ಮತ್ತು ಸಾಂಸ್ಕೃತಿಕ ರಂಗ ಕಲಾವಿದರ, ಸಾಧಕರ ಶ್ರೀಮಾತ ಪ್ರಕಾಶನ ಆಶ್ರಯದಲ್ಲಿ ಇತ್ತೀಚಿಗೆ ಧಾರವಾಡದ ರಂಗಾಯಣ ಸಾಂಸ್ಕೃತಿಕ ಸಮುಚ್ಛಯ ಸಭಾ ಭವನದಲ್ಲಿ ನಡೆದ ಸಮಾರಂಭದಲ್ಲಿ ದಾವಣಗೆರೆಯ ಕಲಾಕುಂಚ, ಯಕ್ಷರಂಗ, ಸಿನಿಮಾಸಿರಿ, ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನದ ಸಂಸ್ಥಾಪಕರಾದ ವಿವಿಧ ಕ್ಷೇತ್ರಗಳಲ್ಲಿ ಕಠಿಣ ಪರಿಶ್ರಮದಿಂದ ನಿರಂತರ ನಾಲ್ಕು ದಶಕಗಳಿಂದ ಸಾಧನೆ ಮಾಡುತ್ತಿರುವ ಸಾಲಿಗ್ರಾಮ ಗಣೇಶ್ ಶೆಣೈಯವರಿಗೆ “ಡಾ. ದ.ರಾ.ಬೇಂದ್ರೆ ಸದ್ಭಾವನ ಸೇವಾ ರತ್ನ” ರಾಜ್ಯ ಪ್ರಶಸ್ತಿಯನ್ನು ಭವ್ಯ ದಿವ್ಯ ವೇದಿಕೆಯಲ್ಲಿ ಗಣ್ಯಮಾನ್ಯರ ಉಪಸ್ಥಿತಿಯಲ್ಲಿ ವಿತರಿಸಲಾಯಿತು ಎಂದು ಸಂಸ್ಥೆಯ ಅಧ್ಯಕ್ಷರಾದ ಡಾ. ನಾಗರಾಜ ತಂಬ್ರಹಳ್ಳಿ ತಿಳಿಸಿದ್ದಾರೆ.
ದಾವಣಗೆರೆ ಗೌಡ ಸಾರಸ್ವತ ಸಮಾಜ, ಕಲಾಕುಂಚ, ಯಕ್ಷರಂಗ, ಸಿನಿಮಾಸಿರಿ, ಕರ್ನಾಟಕ ಸಗಮ ಸಂಗೀತ ಪರಿಷತ್, ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ, ಕನ್ನಡ ಸಾಹಿತ್ಯ ಪರಿಷತ್, ಜಿಲ್ಲಾ ಛಾಯಾಗ್ರಾಹಕ ಸಂಘ, ಸಮಾನ ಮನಸ್ಕರ ವೇದಿಕೆ ಸೇರಿದಂತೆ ವಿವಿಧ ಸಂಘಟನೆಗಳ ಸರ್ವ ಸದಸ್ಯರು, ಪದಾಧಿಕಾರಿಗಳು ಅಭಿಮಾನದಿಂದ ಅಭಿನಂದಿಸಿದ್ದಾರೆ.