ಸಾಲಿಗ್ರಾಮ ಗಣೇಶ್ ಶೆಣೈ ಅವರಿಗೆ -“ಕರ್ನಾಟಕ ಕಾಯಕ ರಾಷ್ಟ್ರೀಯ ಸದ್ಭಾವನಾ ರಾಷ್ಟ್ರ ಪ್ರಶಸ್ತಿ”

0
122

ದಾವಣಗೆರೆ : ಡಿಸೆಂಬರ್, ಬೀದರಿನ ವಿಶ್ವ ಕನ್ನಡಿಗರ ಸಂಸ್ಥೆವತಿಯಿAದ ದಾವಣಗೆರೆ ವಾಣಿಜ್ಯ ನಗರಿಯನ್ನು ಸಾಂಸ್ಕೃತಿಕ ನಗರಿಯಾಗಿ ಪರಿವರ್ತಿಸಿದ ೪ ದಶಕಗಳಿಂದ ಕಠಿಣ ಪರಿಶ್ರಮದಿಂದ ಕಲೆ, ಸಾಹಿತ್ಯ, ಸಂಗೀತ, ಯಕ್ಷಗಾನ ಸೇರಿದಂತೆ ಸಾಂಸ್ಕೃತಿಕ ಚಟುವಟಿಕೆಗಳನ್ನು ನಿರಂತರವಾಗಿ ಸಾಧನೆ ಮಾಡಿದ ಸಾಲಿಗ್ರಾಮ ಗಣೇಶ್ ಶೆಣೈಯವರಿಗೆ

“ಕರ್ನಾಟಕ ಕಾಯಕ ರಾಷ್ಟ್ರೀಯ ಸದ್ಭಾವನ ರಾಷ್ಟ್ರ ಪ್ರಶಸ್ತಿ”ಯನ್ನು ದಿನಾಂಕ 9-12 -2025 ರಂದು ಬೀದರಿನ ಪೂಜ್ಯ ಡಾ. ಚನ್ನಬಸವ ಪಟ್ಟದೇವರು ಜಿಲ್ಲಾ ರಂಗಮಂದಿರದಲ್ಲಿ ಪ್ರದಾನ ಮಾಡಲಾಗುವುದು ಎಂದು ಸಂಸ್ಥೆಯ ಸಂಸ್ಥಾಪಕರಾದ ಡಾ. ಸುಬ್ಬಣ್ಣ ಕರಕನಹಳ್ಳಿಯವರು ಘೋಷಿಸಿದ್ದಾರೆ. ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ, ಯಕ್ಷರಂಗ ಸಂಸ್ಥೆ, ಬಿಚ್ಕತ್ತಿ ಕುಟುಂಬ, ಚಲನಚಿತ್ರ ಅಭಿಮಾನಿಗಳ ಕ್ರಿಯಾತ್ಮಕ ಸಂಸ್ಥೆ ಸಿನಿಮಾಸಿರಿ, ಶ್ರೀಮತಿ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ, ಶ್ರೀ ಗಾಯಿತ್ರಿ ಪರಿವಾರ, ಕನ್ನಡ ಸಾಹಿತ್ಯ ಪರಿಷತ್, ಕರ್ನಾಟಕ ಸಗಮ ಸಂಗೀತ ಪರಿಷತ್, ಸಮಾನ ಮನಸ್ಕರ ವೇದಿಕೆ, ಕಾವೇರಿ ಸಾಂಸ್ಕೃತಿಕ ವೇದಿಕೆ, ಕರಾವಳಿ ಮಿತ್ರ ಮಂಡಳಿ, ಕಾವ್ಯಕುಂಚ, ಕುಂಚ ಕೈಪಡಿ ಸೇರಿದಂತೆ ವಿವಿಧ ಸಂಘಟನೆಗಳ ಸರ್ವ ಸದಸ್ಯರು, ಪದಾಧಿಕಾರಿಗಳು ಅಭಿಮಾನದಿಂದ ಅಭಿನಂದಿಸಿ ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here