ದಾವಣಗೆರೆ: ಬೆಂಗಳೂರಿನ ರಂಗಭೂಮಿ ಕಲಾವಿದರ ಒಕ್ಕೂಟ, ಸೋಶಿಯಲ್ ವರ್ಕಸ್ ಅಸೋಸಿಯೇಷನ್ ಸಂಯುಕ್ತಾಶ್ರಯದಲ್ಲಿ ನಡೆಯುವ ಸಮಾರಂಭದಲ್ಲಿ “ದಾವಣಗೆರೆಯ ಸಾಂಸ್ಕೃತಿಕ ರಾಯಭಾರಿ” ಎಂಬ ಬಿರುದಿನೊಂದಿಗೆ ಯಕ್ಷಗಾನ ಸೇರಿದಂತೆ ಕಲೆ, ಸಾಹಿತ್ಯ, ಸಂಗೀತ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಕಳೆದ ನಾಲ್ಕು ದಶಕಗಳಿಂದ ನಿರಂತರವಗಿ ಕಠಿಣ ಪರಿಶ್ರಮದಿಂದ ಸಾಧನೆ ಮಾಡಿದ್ದನ್ನು ಗುರುತಿಸಿ ಸಾಲಿಗ್ರಾಮ ಗಣೇಶ್ ಶೆಣೈಯವರನ್ನು “ಭಾರತೀಯ ಸೇವಾ ರತ್ನ” ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಬೆಂಗಳೂರಿನ ರಂಗಭೂಮಿ ಕಲಾವಿದರ ಒಕ್ಕೂಟದ ಸಂಸ್ಥಾಪಕರಾದ ಸಾಗರ ಆರ್. ಕಲಾದಗಿ ತಿಳಿಸಿದ್ದಾರೆ.
ಶೆಣೈಯವರು ವಿದ್ಯಾಭ್ಯಾಸಕ್ಕೆ ಪ್ರಾಥಮಿಕ ಶಾಲೆಗೆ ಸೀಮಿತಿವಾದರೂ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ, ಯಕ್ಷರಂಗ ಸೇರಿದಂತೆ ವಿವಿಧ ಸಂಘಟನೆಗಳನ್ನು ಸೃಷ್ಠಿಸಿ ಯಾವುದೇ ಸ್ವಾರ್ಥವಿಲ್ಲದೇ ಸಂಕುಚಿತ ಭಾವನೆ ಬಿಟ್ಟು ವಿಶಾಲವಾದ ಸೇವಾ ಮನೋಭಾವನೆಯೊಂದಿಗೆ ಸಾಧನೆಗೈದ ಶೆಣೈಯವರಿಗೆ ಸೋಶಿಯಲ್ ವರ್ಕಸ್ ಅಸೋಸಿಯೇಷನ್ ಸಂಸ್ಥೆಯ ಸಂಸ್ಥಾಪಕರಾದ ಸೋಮಶೇಖರ್ ಪಿ. ಯಾದವ್ ಅಭಿಮಾನದಿಂದ ಅಭಿನಂದಿಸಿದ್ದಾರೆ.

