ದಾವಣಗೆರೆ : ಹುಬ್ಬಳ್ಳಿಯ ಅಂತರಾಷ್ಟ್ರೀಯ ಹಿಂದೂ ಮಹಾಸಭಾದಿಂದ “ದಾವಣಗೆರೆಯ ಸಾಂಸ್ಕೃತಿಕ ರಾಯಭಾರಿ” ಎಂದೇ ಖ್ಯಾತರಾದ ವಾಣಿಯ ನಗರಿಯನ್ನು ಸಾಂಸ್ಕೃತಿಕ ನಗರಿಯಾಗಿ ಪರಿವರ್ತಿಸಿದ ಕಳೆದ ದಶಕಗಳಿಂದ ನಿರಂತರವಾಗಿ ಕಠಿಣ ಪರಿಶ್ರಮದಿಂದ ಕಲೆ, ಸಾಹಿತ್ಯ, ಸಂಗೀತ, ಯಕ್ಷಗಾನ, ಶಿಕ್ಷಣ ಸೇರಿದಂತೆ ಸಾಧನೆಗಳನ್ನು ಪರಿಗಣಿಸಿ ಸಾಲಿಗ್ರಾಮ ಗಣೇಶ್ ಶೆಣೈಯವರಿಗೆ “ಕಲಾಚೇತನ ” ಅಂತರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅಂತರಾಷ್ಟ್ರೀಯ ಹಿಂದೂ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾದ ಹಲಕರಸಿಂಗ್ ತಿಳಿಸಿದ್ದಾರೆ.
ಏಪ್ರಿಲ್ 15 ರಂದು ಹುಬ್ಬಳ್ಳಿಯಲ್ಲಿ ನಡೆಯುವ ಸಮಾರಂಭದಲ್ಲಿ ವೈಶಿಷ್ಠಪೂರ್ಣವಾಗಿ ವಿಜೃಂಭಣೆಯಿAದ ಈ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಗುವುದು ಎಂದು ಸಂಸ್ಥೆಯ ರಾಜ್ಯಾಧ್ಯಕ್ಷರಾದ ಸೋಮಶೇಖರ ಪಿ.ಯಾದವ್ ಪ್ರಕಟಿಸಿದ್ದಾರೆ.
ಬೆಂಗಳೂರಿನ ವಿದ್ಯಾರ್ಥಿ ಘಟಕದ ರಾಜ್ಯಾಧ್ಯಕ್ಷರಾದ ಸಾಗರ್ ಆರ್. ಕಲಾದಗಿ ಸೇರಿದಂತೆ ದಾವಣಗೆರೆಯ ಕಲಾಕುಂಚ, ಯಕ್ಷರಂಗ, ಸಿನಿಮಾಸಿರಿ, ಕರ್ನಾಟಕ ಸಗಮ ಸಂಗೀತ ಪರಿಷತ್, ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ, ಸಿನಿಮಾಸಿರಿ ಸಂಸ್ಥೆ, ಕರ್ನಾಟಕ ಸಗಮ ಸಂಗೀತ ಪರಿಷತ್, ಕನ್ನಡ ಸಾಹಿತ್ಯ ಪರಿಷತ್, ಕರಾವಳಿ ಮಿತ್ರ ಮಂಡಳಿ ಮುಂತಾದ ಅನೇಕ ಸಂಘಟನೆಗಳ ಸರ್ವ ಸದಸ್ಯರು, ಪದಾಧಿಕಾರಿಗಳು ಅಭಿಮಾನದಿಂದ ಅಭಿನಂದಿಸಿದ್ದಾರೆ.

