JCI ಪರ್ಕಳದಿಂದ “Salute the Silent Star” ಗೌರವ

0
79

ಪರ್ಕಳ : JCI ಪರ್ಕಳ ವತಿಯಿಂದ “Salute the Silent Star” ಗೌರವ ಕಾರ್ಯಕ್ರಮವು 80-ಬಡಗಬೆಟ್ಟು ಗ್ರಾಮ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ನೆರವೇರಿತು. ಸಮಾಜದಲ್ಲಿ ಯಾವುದೇ ಪ್ರಚಾರ ಬಯಸದೆ ಮೌನವಾಗಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗಳನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಯಿತು.

ಗ್ರಾಮ ಪಂಚಾಯತ್‌ನ ನಿಕಟಪೂರ್ವ ಅಧ್ಯಕ್ಷರು ಹಾಗೂ ಖ್ಯಾತ ಸಮಾಜಸೇವಕರಾದ ಕೇಶವ ಕೋಟ್ಯಾನ್ ಅವರಿಗೆ “Salute the Silent Star” ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು. ಸಾಮಾಜಿಕ, ಶೈಕ್ಷಣಿಕ ಹಾಗೂ ಅಭಿವೃದ್ಧಿ ಕಾರ್ಯಗಳಲ್ಲಿ ನಿಸ್ವಾರ್ಥವಾಗಿ ತೊಡಗಿಸಿಕೊಂಡಿರುವ ಅವರು, ಪ್ರಧಾನ ಮಂತ್ರಿಗಳ ಕಚೇರಿಯಿಂದ ಆಹ್ವಾನ ಪಡೆದು 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಅವರ ಸೇವಾ ಸಾಧನೆಗೆ ಸಾಕ್ಷಿಯಾಗಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು JCI ಪರ್ಕಳ ಅಧ್ಯಕ್ಷ JC ಭರತ್ ಕೆ ಕುಲಾಲ್ ವಹಿಸಿದ್ದರು. ತಮ್ಮ ಭಾಷಣದಲ್ಲಿ ಅವರು, ಮೌನವಾಗಿ ದುಡಿಯುವವರನ್ನು ಗುರುತಿಸುವುದು ಸಮಾಜದ ಕರ್ತವ್ಯವೆಂದು ಹೇಳಿದರು. ಪಂಚಾಯತ್ ಆಡಳಿತಾಧಿಕಾರಿ ಡಾ. ಸಂದೀಪ್ ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿರೂಪಾಕ್ಷಯ್ಯ ಕುಲಕರ್ಣಿ, ಕಾರ್ಯದರ್ಶಿ ಶಕುಂತಲಾ ಶೆಟ್ಟಿ ಸೇರಿದಂತೆ ಗಣ್ಯರು ಉಪಸ್ಥಿತರಿದ್ದು, ಕೋಟ್ಯಾನ್ ಅವರ ಸಮಾಜಮುಖಿ ಕಾರ್ಯಗಳನ್ನು ಶ್ಲಾಘಿಸಿದರು.

LEAVE A REPLY

Please enter your comment!
Please enter your name here