ಹೈದರಾಬಾದ್: ಅನಾಥಾಶ್ರಮವೊಂದರಲ್ಲಿ ನೀಡಿದ ಸಮೋಸ ತಿಂದು ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 24 ವಿದ್ಯಾರ್ಥಿಗಳು ತೀವ್ರ ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಆಂಧ್ರ ಪ್ರದೇಶದ ಅನಕಪಲ್ಲಿ ಜಲ್ಲೆಯ ಕೈಲಾಸಪಟ್ಟಣದ ಅನಾಥಾಶ್ರಮವೊಂದರಲ್ಲಿ ಈ ಘಟನೆ ನಡೆದಿದೆ.
ಕೈಲಾಸ ಪಟ್ಟಣದ ಅನಾಥಾಶ್ರಮದಲ್ಲಿ ಎಂದಿನಂತೆ ಮಕ್ಕಳಿಗೆ ತಿಂಡಿಯನ್ನು ನೀಡಲಾಗುತ್ತಿತ್ತು. ತಿಂಡಿ ಜೊತೆ ಸಮೋಸಗಳನ್ನು ನೀಡಲಾಗಿದೆ. ಆದರೆ ಸಮೋಸಾ ತಿಂದ ಕೆಲವೇ ಗಂಟೆಗಳಲ್ಲಿ ಫುಡ್ ಪಾಯಿಸನ್ ಆಗಿದೆ. ವಿದ್ಯಾರ್ಥಿಗಳು ವಾಂತಿ ಮಾಡಲಾರಂಭಿಸಿ ಅಸ್ವಸ್ಥರಾಗಿದ್ದರು ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಮೋಸ ವಿಷಕಾರಿಯಾಗಿದ್ದರಿಂದ ಮೂವರು ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಸಮೋಸ ಯಾಕೆ ವಿಷವಾಯಿತು ಎಂಬುದರ ಬಗ್ಗೆ ತನಿಖೆ ನಡೆಸಲು ಸಿಬ್ಬಂದಿ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.