ಬೆಳ್ತಂಗಡಿ :ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ಇಂಡಿಯಾ ಇದರ ಫೌಂಡೇಶನ್ ಡೇ ಪ್ರಯುಕ್ತ ನಡೆಯಲಿರುವ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಎಮಿನೆಂಟ್ ಇಂಜಿನಿಯರ್ ಆಗಿ ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಸಿವಿಲ್ ಇಂಜಿನಿಯರ್ ರಾದ ಸಂಪತ್ ರತ್ನ ರಾವ್ ರಾಷ್ಟ್ರಮಟ್ಟದ ಪ್ರಶಸ್ತಿಗೆ ಬಾಜನರಾಗಿದ್ದಾರೆ.
ಕಳೆದ 30 ವರ್ಷಗಳಿಂದ ಸಿವಿಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಅತ್ಯುತ್ತಮ ಸೇವೆಯನ್ನು ಸಮಾಜಕ್ಕಾಗಿ ಸಲ್ಲಿಸುತ್ತಿದ್ದಾರೆ. ಇವರು ಜಿಲ್ಲೆಯಾದ್ಯಂತ ಉತ್ತಮ ಗುಣಮಟ್ಟದ ಆಧುನಿಕ ವಿನ್ಯಾಸದ ಕಟ್ಟಡಗಳನ್ನು ನಿರ್ಮಿಸುವಲ್ಲಿ ಹೆಸರುವಾಸಿಯಾಗಿದ್ದಾರೆ.
ಇವರು ಮೇ 4ರಂದು ಮಹಾರಾಷ್ಟ್ರದ ನಾಸಿಕ್ ನ ರಾಡಿಸನ್ ಬ್ಲೂ ಹೋಟೆಲ್ ನಲ್ಲಿ ನಡೆಯುವ ಫೌಂಡೇಶನ್ ಡೇ ಸಮಾರಂಭದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ.