ಸನಾತನ ಸಂಸ್ಕಾರ ತರಬೇತಿ ವರ್ಗ

0
1

ಉಡುಪಿ : ಸನಾತನ ಸಂಸ್ಥೆ ವತಿಯಿಂದ ಮಕ್ಕಳಲ್ಲಿ ನೈತಿಕ ಮೌಲ್ಯಗಳು, ಭಾರತೀಯ ಸಂಸ್ಕೃತಿ, ಸುಸಂಸ್ಕಾರ ಹಾಗೂ ಆತ್ಮವಿಶ್ವಾಸ ಬೆಳೆಸುವ ಉದ್ದೇಶದಿಂದ “ಸನಾತನ ಸಂಸ್ಕಾರ ತರಬೇತಿ ವರ್ಗ – 2026” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.

ಈ ತರಬೇತಿ ವರ್ಗವು ಮೇ 15ರಿಂದ 19ರವರೆಗೆ ಪ್ರತಿದಿನ ಮಧ್ಯಾಹ್ನ 2 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ರಾಜಪುರ ಸಾರಸ್ವತ ಬ್ರಾಹ್ಮಣ ಸಂಘ ಇದರ ಒಂತಿಬೆಟ್ಟು ಸಭಾಂಗಣದಲ್ಲಿ ನಡೆಯಲಿದೆ.

ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಸಂಸ್ಕಾರಯುತ ಶಿಕ್ಷಣ ನೀಡುವ ಉದ್ದೇಶದಿಂದ ಆಯೋಜಿಸಲಾದ ಈ ಶಿಬಿರದಲ್ಲಿ ವಿವಿಧ ಸಂಸ್ಕಾರಾಧಾರಿತ ಚಟುವಟಿಕೆಗಳು, ನೈತಿಕ ಮೌಲ್ಯಗಳ ಬೋಧನೆ ಹಾಗೂ ವ್ಯಕ್ತಿತ್ವ ವಿಕಾಸ ಕಾರ್ಯಕ್ರಮಗಳು ನಡೆಯಲಿವೆ ಎಂದು ಸಂಘಟಕರು ತಿಳಿಸಿದ್ದಾರೆ.

ಆಸಕ್ತ ಪೋಷಕರು ತಮ್ಮ ಮಕ್ಕಳನ್ನು ಕೂಡಲೇ ನೋಂದಾಯಿಸಿಕೊಳ್ಳುವಂತೆ ಮನವಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ 9342599299 ಸಂಖ್ಯೆಯನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here