ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಉಲ್ಲಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಉಳಿಯ, ಉಲ್ಲಾಳ, ಹೊಯ್ಗೆ, ರಾಣಿಪುರ ಪ್ರದೇಶದಲ್ಲಿ ನಡೆಯುತ್ತಿರುವ ಮರಳು ಮಾಫಿಯಾದ ವಿರುದ್ಧ ಕೆಲವು ಸಂಘ ಸಂಸ್ಥೆಗಳು ಸೆ.27ರಂದು ನಡೆಸಲುದ್ದೇಶಿಸಿರುವ ಪ್ರತಿಭಟನೆಯನ್ನು ಪುನರ್ ಪರಿಶೀಲಿಸಬೇಕೆಂದು ಕರ್ನಾಟಕ ಕ್ರೈಸ್ತರ ಸಾಮಾಜಿಕ ಕ್ಷೇಮಾಭಿವೃದ್ಧಿ ಅಸೋಸಿಯೇಷನ್ (ರಿ.) ಆಗ್ರಹಿಸಿದೆ. ಪ್ರದೇಶದಲ್ಲಿ ನಡೆಯುತ್ತಿರುವ ಮರಳು ಮಾಫಿಯಾದ ವಿರುದ್ಧ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಬಹಳ ಪ್ರಾಮಾಣಿಕತೆಯಿಂದ ಶಕ್ತಿಮೀರಿ ಕ್ರಮ ತೆಗೆದುಕೊಳ್ಳುತ್ತಿರುವುದಕ್ಕೆ ಉಲ್ಲೇಖಗಳನ್ನು ಒಸಗಿಸಿರುವ ಸಂಸ್ಥೆ, ಇತ್ತೀಚಿನ ವರ್ಷಗಳಲ್ಲಿ ಯಾವುದೇ ರೀತಿಯ ಮನವಿಯನ್ನು ಸಲ್ಲಿಸದೆ ಸರ್ಕಾರದ ಮಟ್ಟದಲ್ಲಿ ಸಭೆಯನ್ನು ನಡೆಸದೆ ಏಕಾಏಕಿ ಕೆಲವರ ಪ್ರತಿಷ್ಠೆಗಾಗಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರೆ ಸಮುದಾಯದ ವಿರುದ್ಧ ದುಷ್ಪರಿಣಾಮ ಬೀರಲು ಅವಕಾಶ ಆಗಬಾರದು ಎಂದು ಅಸೋಸಿಯೇಶನ್‌ನ ಅಧ್ಯಕ್ಷ ಹ್ಯಾರಿ ಡಿಸೋಜ ತಮ್ಮ ಪ್ರಕಟಣೆಯಲ್ಲಿ ಅಭಿಪ್ರಾಯ ಪಟ್ಟಿದ್ದಾರೆ.
ವಿವರವಾದ ಸಲಹೆಗಳೊಂದಿಗೆ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಶಾಶ್ವತ ಪರಿಹಾರ ಕಂಡುಕೊಳ್ಳಲು ಪ್ರಯತ್ನ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.