ಮೈಸೂರು : ಖ್ಯಾತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಹಾಗೂ ಸಂಕಲನಕಾರರಾದ ನರಹಳ್ಳಿ ಜ್ಞಾನೇಶ್ (48) ಅವರು ಶುಕ್ರವಾರ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಮೂಲತಃ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನವರಾದ ಇವರು, ಕಾರ್ಯನಿಮಿತ್ತ ತಮ್ಮ ಸ್ವಗ್ರಾಮ ನರಹಳ್ಳಿಗೆ ತೆರಳಿದ್ದ ಸಂದರ್ಭದಲ್ಲಿ ತೀವ್ರ ಹೃದಯಾಘಾತಕ್ಕೊಳಗಾಗಿ ಕೊನೆಯುಸಿರೆಳೆದಿದ್ದಾರೆ.

