
ಸಂಸ್ಕೃತ ಭಾಷೆಯ ಮಹತ್ವ, ಸಾಂಸ್ಕೃತಿಕ ಕೊಡುಗೆ ಕುರಿತು ಉಪನ್ಯಾಸ
ಪುತ್ತೂರು : ಅಕ್ಷಯ ಕಾಲೇಜು ಪುತ್ತೂರಿನ ವಾಗ್ವೈಭವ ಸಂಸ್ಕೃತ ಸಂಘದ ವತಿಯಿಂದ ಸೆ.26ರಂದು ಸಂಸ್ಕೃತ ದಿನಾಚರಣೆಯನ್ನು ಆಚರಿಸಲಾಯಿತು. ಕಾಲೇಜಿನ 2ನೇ ಬಿ.ಕಾಂ ತರಗತಿ ಕೊಠಡಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಸ್ಕೃತ ಭಾಷೆಯ ಮಹತ್ವ, ಅದರ ಉಪಯೋಗ ಹಾಗೂ ಸಾಂಸ್ಕೃತಿಕ ಹಿನ್ನೆಲೆಯ ಕುರಿತು ಮಾಹಿತಿ ನೀಡಲಾಯಿತು.
ಕಾರ್ಯಕ್ರಮವು 1ನೇ ಬಿ.ಕಾಂ ವಿದ್ಯಾರ್ಥಿನಿಯರಾದ ಲಾವಣ್ಯ ಮತ್ತು ಕಾವ್ಯ ಅವರ ಪ್ರಾರ್ಥನೆಯೊಂದಿಗೆ ಆರಂಭವಾಯಿತು. 2ನೇ ಬಿ.ಕಾಂನ ರಶ್ಮಿ ರಾವ್ ಸ್ವಾಗತಿಸಿದರು.
ಅಕ್ಷಯ ಕಾಲೇಜಿನ ಪ್ರಾಂಶುಪಾಲರಾದ ಸಂಪತ್ ಕೆ. ಪಕ್ಕಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪುತ್ತೂರಿನ ಸುಧಾನ ವಸತಿ ಶಾಲೆಯ ಶಿಕ್ಷಕಿ ಚೇತನಾ ಪಿ.ಕೆ. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಐಕ್ಯೂಎಸಿ ಸಂಯೋಜಕಿ ರಶ್ಮಿ ಕೆ., ಸಂಸ್ಕೃತ ವಿಭಾಗದ ಮುಖ್ಯಸ್ಥೆ ಸಾಯಿ ಕೃಪಾ ಹಾಗೂ ಸಂಸ್ಕೃತ ಸಂಘದ ಕಾರ್ಯದರ್ಶಿ ಕುಮಾರಿ ಶ್ರೇಯಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಸ್ಕೃತ ವಿಭಾಗದ ಮುಖ್ಯಸ್ಥೆ ಸಾಯಿ ಕೃಪಾ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಸ್ಕೃತ ಭಾಷೆಯ ವೈಶಿಷ್ಟ್ಯ ಹಾಗೂ ಸಂಸ್ಕೃತ ದಿನಾಚರಣೆಯ ಉದ್ದೇಶವನ್ನು ವಿವರಿಸಿದರು. ಬಳಿಕ ದಿಥಿ, ಅಂಕಿತಾ ಮತ್ತು ಅಮೂಲ್ಯ ಅವರಿಂದ ಗುಂಪು ಗೀತೆಯ ಪ್ರಸ್ತುತಿ ನಡೆಯಿತು.
ಮುಖ್ಯ ಅತಿಥಿ ಚೇತನಾ ಪಿ.ಕೆ. ಅವರು ಸಂಸ್ಕೃತ ಭಾಷೆಯ ಪ್ರಾಮುಖ್ಯತೆ, ಉಪಯೋಗ ಹಾಗೂ ಅದರ ಸಾಂಸ್ಕೃತಿಕ ಮಹತ್ವದ ಕುರಿತು ಮಾಹಿತಿಪೂರ್ಣವಾಗಿ ಮಾತನಾಡಿದರು. ಸಂಸ್ಕೃತವು ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯೊಂದಿಗೆ ಹೊಂದಿರುವ ನಂಟನ್ನು ವಿವರಿಸಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಸಂಪತ್ ಕೆ. ಪಕ್ಕಳ ಅವರು ಸಂಸ್ಕೃತ ಭಾಷೆಯ ಮಹತ್ವ ಹಾಗೂ ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಸಂರಕ್ಷಣೆಯಲ್ಲಿ ಅದರ ಪಾತ್ರದ ಕುರಿತು ಮಾತನಾಡಿದರು.
ಇದೇ ಸಂದರ್ಭದಲ್ಲಿ ಸೆಮಿಸ್ಟರ್ ಪರೀಕ್ಷೆಯಲ್ಲಿ ಸಂಸ್ಕೃತ ವಿಷಯದಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಮುಖ್ಯ ಅತಿಥಿ ಚೇತನಾ ಪಿ.ಕೆ. ಅವರಿಂದ ಪ್ರಮಾಣಪತ್ರಗಳನ್ನು ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಕೃತ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು. ಪೂರ್ವಿ ವಂದನಾರ್ಪಣೆ ಸಲ್ಲಿಸಿದರು. ಗಣ್ಯರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳಿಗೆ ಕೃತಜ್ಞತೆ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಸಮಾರೋಪಗೊಳಿಸಲಾಯಿತು.
