ಏಪ್ರಿಲ್ 8, ಬುಧವಾರ 2026ರಂದು ಬೆಳಿಗ್ಗೆ ಸುಮಾರು 10:30 ಗಂಟೆಯ ವೇಳೆಗೆ ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಸಾಣೂರು ಪ್ರದೇಶದ ಸೋಫಿಯಾ ಆಸ್ಪತ್ರೆಯ ಪಕ್ಕದಲ್ಲಿರುವ ಕಲ್ಲು ಬಂಡೆಯ ಎದುರಿನ ಟ್ರಾನ್ಸ್‌ಫಾರ್ಮರ್‌ಗೆ ಹಠಾತ್ತನೆ ಬೆಂಕಿ ಕಾಣಿಸಿಕೊಂಡಿತು.

ಟ್ರಾನ್ಸ್‌ಫಾರ್ಮರ್‌ನಲ್ಲಿ ಉಂಟಾದ ತಾಂತ್ರಿಕ ದೋಷದಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲಿ ಸುತ್ತಮುತ್ತಲಿನ ಒಣ ಗಿಡಗಂಟೆಗಳಿಗೂ ಬೆಂಕಿ ಹಬ್ಬಿತು. ಬೆಂಕಿಯ ಜ್ವಾಲೆಗಳು ಹೆಚ್ಚಾಗಿ ವ್ಯಾಪಿಸುತ್ತಿರುವುದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು.

