ಏ.19 ರಂದು ವಿವಿಧ ಜಿಲ್ಲೆಗಳ ಸಾಧಕರಿಗೆ “ಸರಸ್ವತಿ ಕನ್ನಡ ರತ್ನ” ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ

0
60

ದಾವಣಗೆರೆ : ಸಾಲಿಗ್ರಾಮದ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ ಮತ್ತು ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 19 ರಂದು ಭಾನುವಾರ ಬೆಳಿಗ್ಗೆ 10 ಗಂಟೆಗೆ ದಾವಣಗರೆಯ ಚನ್ನಗಿರಿ ವಿರೂಪಾಕ್ಷಪ್ಪ ಕಲ್ಯಾಣ ಮಂಟಪದಲ್ಲಿ ವಿವಿಧ ಜಿಲ್ಲೆಗಳ ಸಾಧಕರನ್ನು ಗುರುತಿಸಿ “ಸರಸ್ವತಿ ಕನ್ನಡ ರತ್ನ”ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನ ಮತ್ತು ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಗಳ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.ಸಮಾರಂಭದ ಉದ್ಘಾಟನೆಯನ್ನು ಬೀದರ್‌ನ ವಿಶ್ವ ಕನ್ನಡಿಗರ ಸಂಸ್ಥೆಯ ಅಧ್ಯಕ್ಷರಾದ ಡಾ. ಸುಬ್ಬಣ್ಣ ಕರಕನಳ್ಳಿ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಅಧ್ಯಕ್ಷರಾದ ವಾಸುದೇವ ಲಕ್ಷ್ಮ ಣ್‌ರಾಯ್ಕರ್ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಹುಬ್ಬಳ್ಳಿಯ ವಿಶ್ವದರ್ಶನ’ ಕನ್ನಡ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಡಾ.ಎಸ್.ಎಸ್. ಪಾಟೀಲ್, ರಾಯಚೂರಿನಸಂಜೆವಾಹಿನಿ’ ಕನ್ನಡ ದಿನಪತ್ರಿಕೆ ಪ್ರಧಾನ ಸಂಪಾದಕರಾದ ಅಣ್ಣಪ್ಪ ಮೇಟಿಗೌಡ, ಬಾಗಲಕೋಟೆ ಜಿಲ್ಲೆಯ ಜಮಖಂಡಿಯ ಯುವ ಕವಯತ್ರಿ, ಸಾಹಿತಿ, ಡಾ. ಶ್ರೀದೇವಿ ಸೂರ್ಯಕಂತ ಸುವರ್ಣ ಖಂಡಿ, ದಾವಣಗೆರೆಯ `ವಿಸ್ಮಯ ವಾಣಿ’ ಪ್ರಾದೇಶಿಕ ಕನ್ನಡ ದಿನಪತ್ರಿಕೆಯ ಪ್ರಧಾನ ಸಂಪಾದಕರಾದ ಡಾ. ಬಿ.ವಾಸುದೇವ ಆಗಮಿಸಲಿದ್ದಾರೆ. ಗೌರವ ಉಪಸ್ಥಿತರಾಗಿ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಗೌರವ ಅಧ್ಯಕ್ಷರಾದ ಕೆ.ಹೆಚ್.ಮಂಜುನಾಥ್, ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಜ್ಯೋತಿ ಗಣೇಶ್ ಶೆಣೈ, ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾದ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿರುತ್ತಾರೆ.

ವಿವಿಧ ಜಿಲ್ಲೆಗಳಿಂದ ಆಗಮಿಸಿದ ಸಾಧಕರಿಗೆ ಶುಭ ಕೋರಲು ಸಾರ್ವಜನಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಸಮಾರಂಭ ಯಶಸ್ವಿಗೊಳಿಸಬೇಕಾಗಿ ಕಲಾಕುಂಚದ ಪ್ರಧಾನ ಕಾರ್ಯದರ್ಶಿ ಕೆ.ಸಿ. ಉಮೇಶ್ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here