ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಕಾಲೇಜು ಪ್ರಾರಂಭೋತ್ಸವದ ಪ್ರಯುಕ್ತ ಸರಸ್ವತಿ ಪೂಜೆ

0
20

ಪುತ್ತೂರು : ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಕಾಲೇಜು ಪ್ರಾರಂಭೋತ್ಸವದ ಅಂಗವಾಗಿ ಗಣಪತಿ ಹವನ ಹಾಗೂ ಸರಸ್ವತಿ ಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಶೆಕೋಡಿ ಸೂರ್ಯನಾರಾಯಣ ಭಟ್, ಹರಿಪ್ರಸಾದ್, ಪ್ರಕಾಶ್ ಹಾಗೂ ಅನಂತ ಭಟ್ ಇವರುಗಳು ಪೂಜೆಯನ್ನು ನೆರವೇರಿಸಿಕೊಟ್ಟರು. ಈ ಸಂದರ್ಭದಲ್ಲಿ ಸಂಸ್ಥೆಯ ಆವರಣದಲ್ಲಿರುವ ನಾಗಬನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ರವೀಂದ್ರ ಪಿ, ನಿರ್ದೇಶಕರಾದ ವತ್ಸಲಾ ರಾಜ್ಞಿ , ಡಾ. ಕೃಷ್ಣಪ್ರಸನ್ನ ಪ್ರಾಂಶುಪಾಲರಾದ ದೇವಿಚರಣ್ ರೈ ಎಮ್, ಉಪನ್ಯಾಸಕ, ಉಪನ್ಯಾಸಕೇತರ ವೃಂದದವರು ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.

LEAVE A REPLY

Please enter your comment!
Please enter your name here