ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ  ಕಾಲೇಜು ಪ್ರಾರಂಭೋತ್ಸವದ ಪ್ರಯುಕ್ತ ಸರಸ್ವತಿ ಪೂಜೆ

0
16

       ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಕಾಲೇಜು ಪ್ರಾರಂಭೋತ್ಸವದ ಅಂಗವಾಗಿ  ವೈದೇಹಿ ಸಭಾಂಗಣದಲ್ಲಿ ಸರಸ್ವತಿ ಪೂಜಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಕಶೆಕೋಡಿ ಸೂರ್ಯನಾರಾಯಣ ಭಟ್‌ ಅವರ ನೇತೃತ್ವದಲ್ಲಿ ಅರುಣ್‌ ಹಾಗೂ ಪ್ರದೀಪ್ ಇವರು ಸರಸ್ವತಿ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಆವರಣದಲ್ಲಿರುವ ನಾಗಬನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.  ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷರಾದ ರವೀಂದ್ರ ಪಿ, ನಿರ್ದೇಶಕರಾದ ವತ್ಸಲಾ ರಾಜ್ಞಿ ,  ಡಾ. ಕೃಷ್ಣಪ್ರಸನ್ನ .ಕೆ, ಕೋಶಾಧಿಕಾರಿಗಳಾದ ಸಚಿನ್‌ ಶೆಣೈ, ವಿವೇಕಾನಂದ ಪದವಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಪ್ರೊ. ವಿಷ್ಣುಗಣಪತಿ ಭಟ್‌,   ಪ್ರಾಂಶುಪಾಲರಾದ ಎಮ್. ದೇವಿಚರಣ್‌ ರೈ , ಉಪನ್ಯಾಸಕ, ಉಪನ್ಯಾಸಕೇತರ ವೃಂದ, ಪ್ರಥಮ ಪಿಯುಸಿ ವಿದ್ಯಾರ್ಥಿಗಳು  ಹಾಗೂ ಪೋಷಕರು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು.

LEAVE A REPLY

Please enter your comment!
Please enter your name here