ಹೆಬ್ರಿ:ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲೆ ಹಮ್ಮಿಕೊಂಡ ಉತ್ತೇಜನ ಕಾರ್ಯಕ್ರಮ ಸರಸ್ವತಿ ವಿದ್ಯಾಲಯ ಸಿದ್ದಾಪುದಲ್ಲಿ ವಿಭಾಕ ಉಡುಪಿ ಜಿಲ್ಲೆ ಸಮಿತಿಯ ಅಧ್ಯಕ್ಷರು ಶ್ರೀ ಪಾಂಡುರಂಗ ಪೈ ಸಿದ್ಧಾಪುರ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.
ವಿದ್ಯಾಭಾರತಿ ಕರ್ನಾಟಕ ಶೈಕ್ಷಣಿಕ ಸಂಯೋಜಿತ ಸಂಸ್ಥೆಗಳ 2024-25 ನೇ ಸಾಲಿನ 10ನೇ ತರಗತಿ ಪಬ್ಲಿಕ್ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದಿರುವ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸುವ ಉತ್ತೇಜನ -25 ಜ್ಞಾನದ ಸಿರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಂಡಿರುವುದು ಉತ್ತಮ ಸಾಧನೆಗೈದ ವಿದ್ಯಾರ್ಥಿಗೆ ನೀಡುವ ಈ ಉತ್ತೇಜನವಾಗಿದೆ. ವಿದ್ಯಾರ್ಥಿಗಳನ್ನು ಗುರುತಿಸುವುದರೊಂದಿಗೆ ವಿದ್ಯಾರ್ಥಿಗಳಿಗೆ ನೀಡುವ ಪ್ರೋತ್ಸಾಹವು ತುಂಬಾ ಮುಖ್ಯ ವಾಗಿದೆ ಎಂದು ಪಾಂಡುರಂಗ ಪೈ ನುಡಿದರು.
ಕಾರ್ಯಕ್ರಮದಲ್ಲಿ ಶಾಲಾ ಸಂಚಾಲಕರಾದ ಡಿ ಗೋಪಾಲಕೃಷ್ಣ ಕಾಮತ್ , ವಿದ್ಯಾಭಾರತಿ ಕರ್ನಾಟಕ ಉಡುಪಿ ಜಿಲ್ಲಾ ಕಾರ್ಯದರ್ಶಿ ಮಹೇಶ್ ಹೈಕಾಡಿ, ಆಡಳಿತ ವಿಶ್ವಸ್ಥರು ಶ್ರೀನಾಥ್ ಪೈ, ಶ್ರೀಯುತ ಪಾಂಡುರಂಗ ಕಾಮತ್, ಜ್ಞಾನ ಸರಸ್ವತಿ ಪಿ.ಯು ಕಾಲೇಜ್ ಪ್ರಾಂಶುಪಾಲರು ಅಮರೇಶ್ ಹೆಗಡೆ, ಸರಸ್ವತಿ ವಿದ್ಯಾಲಯ ಸಿದ್ದಾಪುರ ಮುಖ್ಯೋಪಾಧ್ಯಾಯಿನಿ ಶ್ವೇತ ಉಪಸ್ಥಿತರಿದ್ದರು. ಶಿಕ್ಷಕಿಯರಾದ ಪೂರ್ಣಿಮಾ ಕಾರ್ಯಕ್ರಮ ನಿರೂಪಿಸಿದರು. ಸುಮನ ಸ್ವಾಗತಿಸಿದರು ಮತ್ತು ಅಮಿತಾ ವಂದಿಸಿದರು.