‘ಉಕ್ಕಿನ ಮನುಷ್ಯ’ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಬಿಜೆಪಿಯಿಂದ ‘ಏಕತಾ ನಡಿಗೆ’
ಹುಟ್ಟು ಸಾವಿನ ನಡುವೆ ನಾವು ಸಮಾಜಕ್ಕೆ ಏನು ಕೊಡುಗೆ ನೀಡಿದ್ದೇವೆ ಎಂಬುದನ್ನು ಜನತೆ ಸದಾ ನೆನಪಿಸಿಕೊಳ್ಳುತ್ತಾರೆ. ಈ ನಿಟ್ಟಿನಲ್ಲಿ ಒಂದು ದೇಶ ಎಂಬ ಪರಿಕಲ್ಪನೆಯಡಿ ರಾಷ್ಟ್ರೀಯ ಏಕೀಕರಣದ ರೂವಾರಿಯಾಗಿ ದೇಶದ ಸಮಗ್ರತೆಗೆ ಸಮರ್ಪಣಾ ಭಾವದ ಸೇವೆ ಸಲ್ಲಿಸಿರುವ ಧೀಮಂತ ನಾಯಕ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ ಜೀವನಾದರ್ಶ ಸದಾ ಸ್ಮರಣೀಯ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಹೇಳಿದರು.
ಅವರು ಉಡುಪಿ ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಬಿಜೆಪಿ ಉಡುಪಿ ನಗರದ ಸಹಯೋಗದೊಂದಿಗೆ ದೇಶದ ಮೊದಲ ಉಪ ಪ್ರಧಾನಿ, ‘ಉಕ್ಕಿನ ಮನುಷ್ಯ’ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ 150ನೇ ಜನ್ಮ ದಿನಾಚರಣೆಯ ಅಂಗವಾಗಿ ಉಡುಪಿ ಕಲ್ಸಂಕದಿಂದ ಬಿಜೆಪಿ ಜಿಲ್ಲಾ ಕಛೇರಿಯ ವರೆಗೆ ನಡೆದ ‘ಏಕತಾ ನಡಿಗೆ’ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್ ಮಾತನಾಡಿ, ದೇಶದ ನೂರಾರು ಕಡೆಗಳಲ್ಲಿ ರಾಜರ ಆಡಳಿತವಿದ್ದ ಸಂಸ್ಥಾನಗಳನ್ನು ದೇಶದೊಂದಿಗೆ ವಿಲೀನಗೊಳಿಸಿ ದೇಶದ ಅಖಂಡತೆ ಮತ್ತು ಏಕತೆಗೆ ದೇಶದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭ ಭಾಯಿ ಪಟೇಲ್ ಅವರ ಕೊಡುಗೆ ಅನನ್ಯ. ಅವರ ಉದಾತ್ತ ಚಿಂತನೆಗಳು ಪಕ್ಷದ ಕಾರ್ಯಕರ್ತರಿಗೆ ಪ್ರೇರಣಾದಾಯಕ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಕಿರಣ್ ಕುಮಾರ್ ಬೈಲೂರು, ಮಹಾವೀರ ಹೆಗ್ಡೆ, ನಳಿನಿ ಪ್ರದೀಪ್ ರಾವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ಶ್ರೀಕಾಂತ್ ನಾಯಕ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿಗಳಾದ ಶಿವಕುಮಾರ್ ಅಂಬಲಪಾಡಿ, ಗಿರೀಶ್ ಎಮ್. ಅಂಚನ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ದಿಲ್ಲೇಶ್ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ರಾಜ್ಯ ಎಸ್.ಸಿ. ಮೋರ್ಚಾ ಉಪಾಧ್ಯಕ್ಷ ದಿನಕರ ಬಾಬು, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಪ್ರಧಾನ ಕಾರ್ಯದರ್ಶಿ ಶಶಾಂಕ್ ಶಿವತ್ತಾಯ, ಜಿಲ್ಲಾ ಒಬಿಸಿ ಮೋರ್ಚಾ ಅಧ್ಯಕ್ಷ ವಿಜಯ ಕೊಡವೂರು, ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಗ್ರಾಮಾಂತರ ಅಧ್ಯಕ್ಷ ರಾಜೀವ್ ಕುಲಾಲ್, ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಪಾಧ್ಯಕ್ಷೆ ರಜನಿ ಹೆಬ್ಬಾರ್, ರಾಜ್ಯ ನೇಕಾರ ಪ್ರಕೋಷ್ಠ ಸಮಿತಿ ಸದಸ್ಯ ರತ್ನಾಕರ ಇಂದ್ರಾಳಿ, ರಾಜ್ಯ ಕಾರ್ಮಿಕ ಪ್ರಕೋಷ್ಠ ಸಮಿತಿ ಸದಸ್ಯ ಶೈಲೇoದ್ರ ಶೆಟ್ಟಿ, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಾಲಕೃಷ್ಣ ಶೆಟ್ಟಿ, ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಪ್ರಭು, ಯುವ ಮೋರ್ಚಾ ಅಧ್ಯಕ್ಷ ಶ್ರೀವತ್ಸ, ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಡೇನಿಸ್ ಮಾಸ್ಕರೇನಸ್, ಎಸ್.ಟಿ. ಮೋರ್ಚಾ ಅಧ್ಯಕ್ಷೆ ಸುಮಾ ನಾಯ್ಕ್, ಗ್ರಾಮಾಂತರ ಮಹಿಳಾ ಮೋರ್ಚಾ ಅಧ್ಯಕ್ಷೆ ರಮ್ಯಾ ರಾವ್ ಹಾಗೂ ಪಕ್ಷದ ಪ್ರಮುಖರು, ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

