ಮುಲ್ಕಿ: ಬುಧವಾರ ಸುರಿದ ಭಾರೀ ಮಳೆಗೆ ಹಳೆಯಂಗಡಿ ಸಮೀಪದ ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನದ ಒಳಗಡೆ ನೀರು ನುಗ್ಗಿದೆ. ಹಳೆಯಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಸಿಹಿತ್ಲು ಪರಿಸರದಲ್ಲಿ ಬುಧವಾರ ರಾತ್ರಿ ಸುರಿದ ಮಳೆಗೆ ಎಲ್ಲ ಕಡೆ ಕೃತಕ ನೆರೆ ಉಂಟಾಗಿದ್ದು ಕೃಷಿ ಹಾನಿ ಸಂಭವಿಸಿದೆ. ತಳಕ್ಕೆ ಪಂಚಾಯತ್ ಸದಸ್ಯ ಅನಿಲ್ ಪೂಜಾರಿ, ಚಂದ್ರಕುಮಾರ್ ಮತ್ತಿತರರು ಭೇಟಿ ನೀಡಿ ಪರಿಶೀಲಿಸಿದ್ದಾರೆ.