Sunday, July 21, 2024
Homeಮಂಗಳೂರುದಕ್ಷಿಣ ಕನ್ನಡದ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಈಗ ಸಂಸದ!

ದಕ್ಷಿಣ ಕನ್ನಡದ ಜಿಲ್ಲಾಧಿಕಾರಿಯಾಗಿದ್ದ ಸಸಿಕಾಂತ್ ಸೆಂಥಿಲ್ ಈಗ ಸಂಸದ!

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದು ಸ್ವಯಂ ನಿವೃತ್ತಿ ಪಡೆದು ರಾಜಕೀಯ ಪ್ರವೇಶಿಸಿದ್ದ ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಈಗ ಸಂಸದರಾಗಿ ಆಯ್ಕೆಯಾಗಿದ್ದಾರೆ. ತಮಿಳುನಾಡಿನ ತಿರುವಲ್ಲೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಸೆಂಥಿಲ್ ಗೆದ್ದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು ಎರಡು ವರ್ಷ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿ ಬಳಿಕ ಸ್ವಯಂ ನಿವೃತ್ತಿ ಪಡೆದಿದ್ದಾರೆ. ಕಳೆದ ವರ್ಷ ನಡೆದ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಗೆಲ್ಲಲು ಸೆಂಥಿಲ್ ಸಾಕಷ್ಟು ಶ್ರಮಿಸಿದ್ದರು ಎನ್ನಲಾಗಿತ್ತು.

RELATED ARTICLES
- Advertisment -
Google search engine

Most Popular