Saturday, June 14, 2025
HomeUncategorizedಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ ಆರಂಭ

ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆ ಆರಂಭ

ಪರಿಶಿಷ್ಟ ಜಾತಿ ಸಮಗ್ರ ಸಮೀಕ್ಷೆಯು ಸೋಮವಾರದಿಂದ ಆರಂಭಗೊಂಡಿದೆ. ಬೆಳಗ್ಗೆ 6.30 ರಿಂದ ಸಂಜೆ 6.30ರ ವರೆಗಿನ ಅವಧಿಯಲ್ಲಿ ಗಣತಿದಾರರು ಮನೆ- ಮನೆಗಳಿಗೆ ಭೇಟಿ ನೀಡುತ್ತಿದ್ದು, ಪರಿಶಿಷ್ಟ ಜಾತಿಯವರು ತಮ್ಮ ಮೂಲ ಜಾತಿ, ಶಿಕ್ಷಣ, ವರಮಾನ, ಉದ್ಯೋಗ ಮತ್ತು ಇನ್ನಿತರ ಪ್ರಮುಖ ಮಾಹಿತಿಯನ್ನು ತಪ್ಪದೇ ನೀಡಬೇಕು. ಎಂದು ಸಿಎಂ ಸಿದ್ದರಾಮಯ್ಯ ತಿಳಿದ್ದಾರೆ.
ಮೊದಲನೇ ಹಂತದಲ್ಲಿ ಮೇ 05 ರಿಂದ ಮೇ 17ರ ವರೆಗೆ ಮನೆ ಮನೆ ಸಮೀಕ್ಷೆ ಕೈಗೊಳ್ಳಲಾಗುತ್ತಿದೆ. ಎರಡನೇ ಹಂತದಲ್ಲಿ ಮೇ 19 ರಿಂದ ಮೇ 21ರ ವರೆಗೆ ವಿಶೇಷ ಶಿಬಿರಗಳಲ್ಲಿ ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ. ಮೂರನೇ ಹಂತದಲ್ಲಿ ಮೇ 19 ರಿಂದ ಮೇ 23ರ ವರೆಗೆ ಆನ್‌ಲೈನ್ ಮೂಲಕ ಸ್ವಯಂ ಘೋಷಣೆಗೆ ಅವಕಾಶ ಕಲ್ಪಿಸಲಾಗಿದೆ.
ಸಮೀಕ್ಷೆ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಆರಂಭಿಸಲಾಗಿದ್ದು, ಸಮಾಜ ಕಲ್ಯಾಣ ಇಲಾಖೆ – ಕಂಟ್ರೋಲ್ ರೂಂ – 9482300400 ಹಾಗೂ ಜಸ್ಟಿಸ್ ನಾಗಮೋಹನ ದಾಸ್ ಆಯೋಗ (ಒಳ ಮೀಸಲಾತಿ ಕುರಿತು) – 9481359000 ಕ್ಕೆ ಸಂಪರ್ಕಿಸಬಹುದಾಗಿದೆ.

RELATED ARTICLES
- Advertisment -
Google search engine

Most Popular