ಬ್ಯಾರೀಸ್ ಕಲ್ಚರಲ್ ಫೋರಂನಿಂದ ವಿದ್ಯಾರ್ಥಿ ವೇತನ, ಹೊಲಿಗೆ ಯಂತ್ರ ವಿತರಣಾ ಕಾರ್ಯಕ್ರಮ

0
5

ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಬ್ಯಾರೀಸ್ ಕಲ್ಚರಲ್ ಫೋರಂ ಕಳೆದ 25 ವರ್ಷಗಳಿಂದ ವಿದ್ಯಾರ್ಥಿವೇತನ ಹಾಗೂ ಇತರ ಸೌಲಭ್ಯಯುತ ವಸ್ತುಗಳನ್ನು ವಿತರಿಸುತ್ತಿದೆ. ಈ ವರ್ಷವೂ ಪಿಯುಸಿ, ಪದವಿ ವ್ಯಾಸಂಗ ಮಾಡುತ್ತಿರುವ 300ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ, ಸುಮಾರು 100 ಮಹಿಳೆಯರಿಗೆ ಸ್ವ ಉದ್ಯೋಗ ಕೈಗೊಳ್ಳಲು ಉಚಿತವಾಗಿ ಹೋಲಿಕೆ ಯಂತ್ರಗಳನ್ನು ವಿತರಿಸುವ ಕಾರ್ಯಕ್ರಮ ಆಗಸ್ಟ್ 16ರಂದು ಮಂಗಳೂರಿನ ಟೌನ್ ಹಾಲ್ನಲ್ಲಿ ನಡೆಯಲಿದೆ.

ಇದೇ ಸಂದರ್ಭದಲ್ಲಿ ವ್ಯಕ್ತಿತ್ವ ವಿಕಸನ ಶಿಬಿರವನ್ನು ಕೂಡ ಆಯೋಜಿಸಲಾಗಿದ್ದು ಅಮೆರಿಕನ್ ಸಿಟಿ ಕಾಲೇಜಿನ ನಿರ್ದೇಶಕರು ಕಾಪು ಮೊಹಮ್ಮದ್ ಹಾಗೂ ಮನಾಲ್ ಕಾಪು ಅವರು ಶಿಬಿರವನ್ನು ನಡೆಸಿಕೊಡಲಿದ್ದಾರೆ ಎಂದು ಬಿಸಿಎಫ್ ಅಧ್ಯಕ್ಷ ಡಾ ಬಿಕೆ ಯೂಸುಫ್, ಎಂ ಈ ಮೂಳೂರು, ಡಾ ಕಾಪು ಮೊಹಮ್ಮದ್, ಇಬ್ರಾಹಿಂ ಗಡಿಯಾರ್, ಅಬು ಸಾಲಿಹ್, ಅಬ್ದುಲ್ಲ್ ಲತೀಫ್ ಹಾಗೂ ಇತರರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.