Saturday, June 14, 2025
HomeUncategorized2.5 ಲಕ್ಷ ಹೆಣ್ಣುಮಕ್ಕಳಿಗೆ ವಿದ್ಯಾರ್ಥಿವೇತನ ಯೋಜನೆ

2.5 ಲಕ್ಷ ಹೆಣ್ಣುಮಕ್ಕಳಿಗೆ ವಿದ್ಯಾರ್ಥಿವೇತನ ಯೋಜನೆ


ಮಂಗಳೂರು: ಶಾಲಾ ಶಿಕ್ಷಣ ಪೂರೈಸಿದ ನಂತರ ಉನ್ನತ ಶಿಕ್ಷಣ ಪಡೆಯಲು ಬಯಸುವ ಹೆಣ್ಣುಮಕ್ಕಳಿಗೆ ನೆರವಾಗುವ ಉದ್ದೇಶದಿಂದ ಅಜೀಂ ಪ್ರೇಮ್‍ಜಿ ಫೌಂಡೇಷನ್ ಇಂದು ಅಜೀಂ ಪ್ರೇಮ್‍ಜಿ ವಿದ್ಯಾರ್ಥಿವೇತನವನ್ನು ಘೋಷಿಸಿದೆ. 2025-26 ನೇ ಶೈಕ್ಷಣಿಕ ವರ್ಷದಲ್ಲಿ ದೇಶದ 18 ರಾಜ್ಯಗಳ 2.5 ಲಕ್ಷ ಹೆಣ್ಣುಮಕ್ಕಳಿಗೆ ಅಜೀಂ ಪ್ರೇಮ್‍ಜಿ ವಿದ್ಯಾರ್ಥಿವೇತನ ನೀಡಲು ಉದ್ದೇಶಿಸಲಾಗಿದೆ.
ಸರ್ಕಾರಿ ಶಾಲೆಗಳಲ್ಲಿ 10 ಮತ್ತು 12ನೇ ತರಗತಿ ಪೂರೈಸಿ, ಮಾನ್ಯತೆ ಪಡೆದ ಖಾಸಗಿ ಅಥವಾ ಸರ್ಕಾರಿ ಕಾಲೇಜುಗಳಲ್ಲಿ ಪದವಿ ಅಥವಾ ಡಿಪ್ಲೋಮಾ ಕೋರ್ಸ್‍ಗೆ ಪ್ರವೇಶ ಪಡೆದ ಹೆಣ್ಣುಮಕ್ಕಳು ಈ ಸೌಲಭ್ಯಕ್ಕೆ ಅರ್ಹರಾಗಿರುತ್ತಾರೆ,
ಪದವಿ/ ಡಿಪ್ಲೋಮಾ ಕೋರ್ಸ್‍ಗೆ ವಾರ್ಷಿಕ 30 ಸಾವಿರ ರೂಪಾಯಿ ವಿದ್ಯಾರ್ಥಿ ವೇತನ ದೊರೆಯುತ್ತದೆ. ಈ ಹಣವನ್ನು ಪ್ರತಿ ವರ್ಷ ಎರಡು ಕಂತುಗಳಲ್ಲಿ ಹೆಣ್ಣುಮಕ್ಕಳ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುವುದು. ಅವರು ಈ ಹಣವನ್ನು ತಮಗೆ ಬೇಕಾದ ರೀತಿಯಲ್ಲಿ ಬಳಸಿಕೊಳ್ಳಬಹುದು ಎಂದು ಅಜೀಂ ಪ್ರೇಮ್‍ಜಿ ಫೌಂಡೇಷನ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನುರಾಗ್ ಬೆಹರ್ ಹೇಳಿದ್ದಾರೆ.
ಕಳೆದ ವರ್ಷ ಪ್ರಾಯೋಗಿಕವಾಗಿ ನಾಲ್ಕು ರಾಜ್ಯಗಳ 25 ಸಾವಿರ ವಿದ್ಯಾರ್ಥಿನಿಯರಿಗೆ ಈ ಸೌಲಭ್ಯ ಒದಗಿಸಲಾಗಿತ್ತು. ಅರ್ಜಿ ಸಲ್ಲಿಕೆಯ ಪ್ರಕ್ರಿಯೆ ಸೆಪ್ಟೆಂಬರ್‍ನಲ್ಲಿ ಆರಂಭವಾಗಲಿದೆ.

RELATED ARTICLES
- Advertisment -
Google search engine

Most Popular