Wednesday, September 11, 2024
Homeರಾಜ್ಯಶಾಲಾ ವಾಹನಕ್ಕೆ ಕೆಎಸ್ಸಾರ್ಟಿಸಿ ಬಸ್ಸು ಡಿಕ್ಕಿ | ಇಬ್ಬರು ಮಕ್ಕಳು ಸಾವು; 15 ವಿದ್ಯಾರ್ಥಿಗಳಿಗೆ ಗಾಯ

ಶಾಲಾ ವಾಹನಕ್ಕೆ ಕೆಎಸ್ಸಾರ್ಟಿಸಿ ಬಸ್ಸು ಡಿಕ್ಕಿ | ಇಬ್ಬರು ಮಕ್ಕಳು ಸಾವು; 15 ವಿದ್ಯಾರ್ಥಿಗಳಿಗೆ ಗಾಯ

ಮಾನ್ವಿ: ಶಾಲಾ ವಾಹನ ಹಾಗೂ ಕೆಎಸ್ಸಾರ್ಟಿಸಿ ಬಸ್ಸು ಡಿಕ್ಕಿಯಾಗಿ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್‌ ಗ್ರಾಮದಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, 15 ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಲೋಯಲ ಶಾಲೆಯ ವಿದ್ಯಾರ್ಥಿಗಳಾದ ಅಮರೇಶ (7) ಮತ್ತು ಶ್ರೀಕಾಂತ ಮಾರೇಶ (12) ಮೃತಪಟ್ಟಿದ್ದಾರೆ. ಒಬ್ಬ ಬಾಲಕ ಮತ್ತು ಚಾಲಕನ ಸ್ಥಿತಿ ಗಂಭೀರವಾಗಿದೆ. ಭೀಕರ ಅಪಘಾತದಲ್ಲಿ ಮೂರು ಮಕ್ಕಳ ಕಾಲುಗಳು ತುಂಡಾಗಿವೆ ಎನ್ನಲಾಗಿದೆ.
ಲೋಯಲ ಶಾಲೆಯ ಶಾಲಾ ವಾಹನಕ್ಕೆ ಮಾನ್ವಿಯಿಂದ ರಾಯಚೂರು ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸು ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡ ಮೂವರು ಮಕ್ಕಳನ್ನು ರಾಯಚೂರಿನ ರಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲಾಧಿಕಾರಿ ನಿತೀಶ್‌ ಕೆ. ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ. ಮುಖ್ಯಮಂತ್ರಿ ನಿಧಿಯಿಂದ ಮಕ್ಕಳ ಪೋಷಕರಿಗೆ ತಲಾ 5 ಲಕ್ಷ ರೂ. ಮತ್ತು ರಸ್ತೆ ಸಾರಿಗೆ ಸಂಸ್ಥೆಯಿಂದಲೂ ಪರಿಹಾರ ಕೊಡಿಸುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

RELATED ARTICLES
- Advertisment -
Google search engine

Most Popular