ತಿರುವನಂತಪುರ: ಶಾಲಾ ಬಸ್ ಪಲ್ಟಿಯಾಗಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟು ಹಲವು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೇರಳದ ಕಣ್ಣೂರಿನ ವಳಕೈನಲ್ಲಿ ಸಂಭವಿಸಿರುವ ಬಗ್ಗೆ ವರದಿಯಾಗಿದೆ.
ಘಟನೆಯಲ್ಲಿ 5ನೇ ತರಗತಿಯ ವಿದ್ಯಾರ್ಥಿನಿ ನೇದ್ಯಾ ಎಸ್.ರಾಜೇಶ್ ಮೃತಪಟ್ಟಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಚಾಲಕ ವಾಹನ ಚಲಾಯಿಸುವಾಗ ಫೋನ್ ಬಳಸಿರುವುದೇ ಅಪಘಾತಕೆ ಕಾರಣ ಎನ್ನಲಾಗಿದ್ದು, ಘಟನೆ ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿದೆ.