ಶಾಲಾ ಕ್ರೀಡಾಕೂಟ: ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸಮವಸ್ತ್ರ ಕೊಡುಗೆ

0
68

ಬೆಳ್ತಂಗಡಿ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಯುವ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದಲ್ಲಿ ಬೆಳ್ತಂಗಡಿ ತಾಲೂಕನ್ನು ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ ಶಾಸಕರಾದ ಹರೀಶ್ ಪೂಂಜಾರವರು ಕ್ರೀಡಾ ಸಮವಸ್ತ್ರವನ್ನು ಒದಗಿಸಿದ್ದಾರೆ.

ಗ್ರಾಮೀಣ ಕ್ರೀಡಾ ಪ್ರತಿಭೆಗಳಿಗೆ ಬೆಂಬಲ ನೀಡುವ ಸಲುವಾಗಿ ಕಳೆದ ಏಳು ವರ್ಷಗಳಿಂದ ಕ್ರೀಡಾ ಸಮವಸ್ತ್ರಗಳನ್ನು ಒದಗಿಸುತ್ತಿದ್ದಾರೆ. ಅದೇ ರೀತಿ ಈ ವರ್ಷವೂ ಕೂಡಾ ಸುಮಾರು ರೂ. 70,000 ಮೌಲ್ಯದ ಕ್ರೀಡಾ ಸಮವಸ್ತ್ರವನ್ನು ಒದಗಿಸಿದ್ದಾರೆ. ಹರೀಶ್ ಪೂಂಜಾರವರ ಮನೆಯಲ್ಲಿ ಸಾಂಕೇತಿಕವಾಗಿ ತಾಲೂಕಿನ ಕ್ರೀಡಾ ಪ್ರತಿಭೆಗಳಿಗೆ ಸಮವಸ್ತ್ರವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಶಾಲಾ ಶಿಕ್ಷಣ ಇಲಾಖೆಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಶ್ರೀಮತಿ ಸುಜಯಾ ಬಿ., ಬೆಳ್ತಂಗಡಿ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಕೃಷ್ಣನಂದ ರಾವ್, ದ.ಕ. ಜಿಲ್ಲೆಯ ಗ್ರೇಡ್ -2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ರವಿರಾಜ್ ಗೌಡ, ಬೆಳ್ತಂಗಡಿ ತಾಲೂಕು ಗ್ರೇಡ್ – 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಸುಭಾಶ್ಚಂದ್ರ, ಬೆಳ್ತಂಗಡಿ ತಾಲೂಕು ಗ್ರೇಡ್ – 2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಅಖಿಲ್ ಕುಮಾರ್, ಗ್ರೇಡ್ – 1 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್, ಪದಾಧಿಕಾರಿ ಅಜಿತ್ ಕುಮಾರ್ ಹಾಗೂ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here