Saturday, April 19, 2025
Homeಬಂಟ್ವಾಳನರಿಕೊಂಬು ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ ಕಾರ್ಯಕ್ರಮ

ನರಿಕೊಂಬು ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ದಿನಾಚರಣೆ ಕಾರ್ಯಕ್ರಮ

ಬಂಟ್ವಾಳ : ಮಕ್ಕಳಿಗೆ ಎಳವೆಯಲ್ಲಿ ವಿಜ್ಞಾನದ ಬೆಳವಣಿಗೆ ತಂತ್ರಜ್ಞಾನದ ಮಾಹಿತಿ ದೊರೆತಾಗ ಯಾವುದೇ ವಿಚಾರಗಳ ಸತ್ಯತೆಯನ್ನು ತಿಳಿಸಿಕೊಡುತ್ತದೆ.ಇದರಿಂದ ಮೂಡನಂಬಿಕೆಗಳು ನಾಶವಾಗುತ್ತವೆ ಮತ್ತು ಜೀವನದಲ್ಲಿ ಸಾರ್ಥಕತೆಯನ್ನು ಪಡೆದುಕೊಳ್ಳುತ್ತಾರೆ , ವಿದ್ಯಾರ್ಥಿಗಳು ವೈಜ್ಞಾನಿಕ ದೃಷ್ಟಿಕೋನವನ್ನು ಬೆಳೆಸಿಕೊಳ್ಳಬೇಕು ಎಂದು ಬಂಟ್ವಾಳ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜಯರಾಮ್ ಹೇಳಿದರು.

ಅವರು ಶುಕ್ರವಾರ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನರಿಕೊಂಬು ಇಲ್ಲಿ ವಿಜ್ಞಾನ ದಿನಾಚರಣೆ ಪ್ರಯುಕ್ತ ವಿಜ್ಞಾನ ಪ್ರಯೋಗ ಪ್ರದರ್ಶನ ಕಾರ್ಯಕ್ರಮದಲ್ಲಿ ಮಕ್ಕಳು ಪ್ರದರ್ಶಿಸಿದ ವಿಜ್ಞಾನ ಮಾದರಿಗಳನ್ನು ವೀಕ್ಷಿಸಿ ಮಾತನಾಡಿದರು. ಶಾಲಾ ಮಕ್ಕಳು ತಮ್ಮ ತಮ್ಮ ಮನೆಯಲ್ಲಿ ವಿಜ್ಞಾನಕ್ಕೆ ಸಂಬಂಧಪಟ್ಟಂತಹ ವಿವಿಧ ಮಾದರಿಗಳನ್ನು ತಯಾರಿಸಿ ಪ್ರದರ್ಶನ ಮಾಡಿದರು.

ಈ ಸಂದರ್ಭದಲ್ಲಿ ಶಾಲಾ ಗ್ರಂಥಾಲಯಕ್ಕೆ ಸುಮಾರು 20 ಸಾವಿರ ರೂಪಾಯಿ ಮೌಲ್ಯದ ಪುಸ್ತಕಗಳನ್ನು ಉಚಿತವಾಗಿ ನೀಡಿದ ಶಾಲಾ ಹಿರಿಯ ವಿದ್ಯಾರ್ಥಿ ಕರಾವಳಿ ಪ್ರಕಾಶನದ ಮಾಲಕರ ಜಗದೀಶ್, ಪುಸ್ತಕಗಳನ್ನು ಹಸ್ತಾಂತರಿಸಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘ ಬಂಟ್ವಾಳ ತಾಲೂಕು ಕಾರ್ಯದರ್ಶಿ ಸಂತೋಷ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರವಿ ಅಂಚನ್, ಶಾಲಾಭಿವೃದ್ಧಿ ಸಮಿತಿ ಸದಸ್ಯರುಗಳು, ಮಕ್ಕಳ ಪೋಷಕರು ಭಾಗವಹಿಸಿದ್ದರು. ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಶೋಭಾ ಸ್ವಾಗತಿಸಿ, ಪ್ರಭಾರ ಮುಖ್ಯ ಶಿಕ್ಷಕಿ ಸುಜಾತ ವಂದಿಸಿದರು. ಶಾಲಾ ಶಿಕ್ಷಕಿಯರು ಸಹಕರಿಸಿದರು.

RELATED ARTICLES
- Advertisment -
Google search engine

Most Popular