ಮೂಲ್ಕಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಮೂಲ್ಕಿ ತಾಲೂಕು ವತಿಯಿಂದ ನೂತನ ಸ್ಕೌಟ್ಸ್ ಎಂಡ್ ಗೈಡ್ಸ್ ಘಟಕದ ಪ್ರಾರಂಭೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಉಚಿತ ಸ್ಕೌಟ್ಸ್ ಸಮವಸ್ತ್ರ ವಿತರಣಾ ಕಾರ್ಯಕ್ರಮ ಆ.8ರಂದು ಗುರುವಾರ ನಡೆಯಲಿದೆ. ಭಾರತ್ ಸ್ಕೌಟ್ಸ್ ಎಂಡ್ ಗೈಡ್ಸ್ ಕರ್ನಾಟಕದ ರಾಜ್ಯ ಮುಖ್ಯ ಆಯುಕ್ತರಿ ಹಾಗೂ ಮಾಜಿ ಗೃಹ ಸಚಿವರು ಪಿ.ಜಿ.ಆರ್. ಸಿಂಧ್ಯಾ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಭಾರತ್ ಸ್ಕೌಟ್ಸ್ ಎಂಡ್ ಗೈಡ್ಸ್ ದ.ಕ. ಜಿಲ್ಲೆಯ ಜಿಲ್ಲಾ ಮುಖ್ಯ ಆಯುಕ್ತ ಡಾ. ಎಂ. ಮೋಹನ್ ಆಳ್ವ ಕಾರ್ಯಕ್ರಮ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಉಮಾನಾಥ ಕೋಟ್ಯಾನ್, ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಮಾಜಿ ಸಚಿವ ಅಭಯಚಂದ್ರ ಜೈನ್ ಸಹಿತ ಹಲವು ಗಣ್ಯರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಕೆಎಸ್ ರಾವ್ ನಗರ, ಕಾರ್ನಾಡು, ಮೂಲ್ಕಿಯ ನಾರಾಯಣಗುರು ಸಭಾಗೃಹದಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಕಾರ್ಯಕ್ರಮ ಸಂಘಟಕರು ತಿಳಿಸಿದ್ದಾರೆ.