ಜಿಲ್ಲಾ ಮಟ್ಟದ ಜಾನಪದ ಸ್ಪರ್ಧೆಯಲ್ಲಿ ಪ್ರಥಮ
ಉಜಿರೆ : ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಂಗಳೂರಿನ ತುಳು ಭವನದಲ್ಲಿ ಆಯೋಜಿಸಿದ 14 ರಿಂದ 18 ವರ್ಷ ವಯೋಮಿತಿಯ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಜಾನಪದ ಗೀತೆ ಸ್ಪರ್ಧೆಯಲ್ಲಿ ಧರ್ಮಸ್ಥಳದ ಎಸ್.ಡಿ. ಎಂ ಆಂಗ್ಲ ಮಾಧ್ಯಮ ಶಾಲೆಯ ಧರ್ಮಸ್ಥಳದ ಸಚಿನ್ ಮತ್ತು ಶ್ರೀದೇವಿ ದಂಪತಿಗಳ ಪುತ್ರಿ ಸಾನ್ವಿ ಬಿ ಭಾಗವಹಿಸಿ, ಪ್ರಥಮ ಸ್ಥಾನ ಗಳಿಸಿದ್ದಾರೆ. ಈ ಮೂಲಕ ಜನವರಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಜಾನಪದ ಗೀತೆ ಸ್ಪರ್ಧೆಗೆ ಆಯ್ಕೆಗೊಂಡು, ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ಇವರಿಗೆ ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗು ಶಾಲೆ ಶಿಕ್ಷಕರ ವೃಂದ ಅಭಿನಂದನೆಗಳನ್ನು ತಿಳಿಸಿರುತ್ತಾರೆ.

