ದಾವಣಗೆರೆ : ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಗಳ ಆಶ್ರಯದಲ್ಲಿ ಸೆಪ್ಟೆಂಬರ್ 6 ರಂದು ಭಾನುವಾರ ಬೆಳಿಗ್ಗೆ 10.00 ಗಂಟೆಗೆ ದಾವಣಗೆರೆಯ ಜಯದೇವ ವೃತ್ತದ ಹತ್ತಿರವಿರುವ ರೋಟರಿ ಬಾಲ ಭವನದಲ್ಲಿ ಕಾವ್ಯಕುಂಚ 6ನೇ ಭಾಗದ ಕವನ ಸಂಕಲನ ಲೋಕಾರ್ಪಣೆಯಾಗಲಿದೆ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ತಿಳಿಸಿದ್ದಾರೆ. ರಾಯಚೂರಿನ ಕವಯತ್ರಿ, ಸಾಹಿತಿ, ಶ್ರೀ ಸಿದ್ದೇಶ್ವರ ಸಾಹಿತ್ಯ ವೇದಿಕೆಯ ಸಂಸ್ಥಾಪಕರಾದ ಗಿರಿಜಾ ಮಾಲಿ ಪಾಟೀ ಪುಸ್ತಕ ಲೋಕಾರ್ಪಣೆ ಮಾಡಲಿದ್ದಾರೆ. ಸಮಾರಂಭದ ಅಧ್ಯಕ್ಷತೆಯನ್ನುಕಾವ್ಯಕುಂಚ” ಕವನ ಸಂಕಲನದ ಪ್ರಧಾನದ ಸಂಪಾದಕರಾದ ಸಾಲಿಗ್ರಾಮ ಗಣೇಶ್ ಶೆಣೈಯವರು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಚಿಕ್ಕಮಗಳೂರಿನ ಛಾಯಾಗ್ರಾಹಕರು, ಸಾಹಿತಿಗಳು, ರಚಿತಾ ಮಹಿಳಾ ಸಮಾಜದ ಸಂಸ್ಥಾಪಕರಾದ ಕವಿತಾ ಗೋಪಾಲ್, ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಗಳ ಅಧ್ಯಕ್ಷರಾದ ವಾಸುದೇವ ಲಕ್ಷö್ಮಣ್ ರಾಯ್ಕರ್, ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಗಳ ಗೌರವ ಅಧ್ಯಕ್ಷರಾದ ಕೆ.ಹೆಚ್.ಮಂಜುನಾಥ್, ಶಿವಮೊಗ್ಗದ ಕವಿಗಳು ಸಂಪದ ಸಾಲು ಪತ್ರಿಕೆಯ ಪ್ರಧಾನ ಸಂಪಾದಕರಾದ ವೆಂಕಟೇಶ್ ಎಸ್.ಸಂಪ, ಕಲಾಕುಂಚ ಮಹಿಳಾ ವಿಭಾಗದ ಸಂಸ್ಥಾಪಕರಾದ ಜ್ಯೋತಿ ಗಣೇಶ್‌ಶೆಣೈ, ಕಲಾಕುಂಚ ಮಹಿಳಾ ವಿಭಾಗದ ಅಧ್ಯಕ್ಷರಾದ ಹೇಮಾ ಶಾಂತಪ್ಪ ಪೂಜಾರಿ ಆಗಮಿಸಲಿದ್ದಾರೆ.
ಕಾವ್ಯಕುಂಚ ಸಂಕಲನಕ್ಕೆ ಕವನ ಕೊಟ್ಟವರಿಗೆಲ್ಲಾ ಕವಿ,ಕವಯತ್ರಿಯರಿಗೆ ರಾಜ್ಯ ಮಟ್ಟದ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿದೆ ಎಂದು ಕಲಾಕುಂಚ ಮಹಿಳಾ ವಿಭಾಗದ ಸಮಿತಿ ಸದಸ್ಯರಾದ ಶಿಲ್ಪಾ ಉಮೇಶ್ ಪ್ರಕಟಿಸಿದ್ದಾರೆ.

