ಸೆ. 7ರಂದು ಸಾಮೂಹಿಕ ಶ್ರೀ ಗಾಯತ್ರಿ ಪೂಜೆ – ಉಪಾಸನೆ ಕಾರ್ಯಕ್ರಮ

0
127

ದಾವಣಗೆರೆ: ನಗರದ ಶ್ರೀ ಗಾಯತ್ರಿ ದೇವಿಯ ಉಪಾಸಕರ ಕ್ರಿಯಾತ್ಮಕ ಆಧ್ಯಾತ್ಮ ಸಂಸ್ಥೆ ಶ್ರೀ ಗಾಯತ್ರಿ ಪರಿವಾರದಿಂದ ಪ್ರತೀ ತಿಂಗಳ ಹುಣ್ಣಿಮೆಯೆಂದು ನಡೆಸುವ ಸಾಮೂಹಿಕ ಶ್ರೀ ಗಾಯತ್ರಿ ಪೂಜೆ, ಉಪಾಸನೆ, ಅನಂತನ ಹುಣ್ಣಿಮೆ ಅಂಗವಾಗಿ ದಿನಾಂಕ ೦೭-೦೯-೨೦೨೫ ರಂದು ಭಾನುವಾರ ಬೆಳಿಗ್ಗೆ ೭-೦೦ಕ್ಕೆ ನಡೆಯಲಿದೆ ಎಂದು ಶ್ರೀ ಗಾಯಿತ್ರಿ ಪರಿವಾರದ ಅಧ್ಯಕ್ಷರಾದ ಡಾ|| ರಮೇಶ್ ಪಟೇಲ್ ಪಟೇಲ್ ತಿಳಿಸಿದ್ದಾರೆ.

ನಗರದ ಜಯದೇವ ವೃತ್ತದಲ್ಲಿರುವ ಶ್ರೀ ಶಂಕರಮಠದಲ್ಲಿ ನಡೆಯಲಿರುವ ಆಧ್ಯಾತ್ಮ ಸಮಾರಂಭದ ಈ ಬಾರಿಯ ಪೂಜಾ ಸೇವಾಕರ್ತರಾದ ಎಂ. ವೀರಭದ್ರರಾವ್ ಮತ್ತು ಕುಟುಂಬದವರು ಕಳೆದ 25 ವರ್ಷಗಳಿಂದಲೂ ನಿರಂತರವಾಗಿ ಪ್ರತೀ ಪೂರ್ಣಿಮೆ ಯಂದು ನಡೆಯುವ ಈ ಧಾರ್ಮಿಕ ಪ್ರಕ್ರಿಯೆಯಲ್ಲಿ ಆಸಕ್ತ ಸಾರ್ವಜನಿಕರು ಯಾವುದೇ ಜಾತಿ, ಮತ, ವರ್ಣ, ಲಿಂಗ ಬೇಧವಿಲ್ಲದೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ, ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಪರಿವಾರದ ಪ್ರಧಾನ ಕಾರ್ಯದರ್ಶಿ ಸಾಲಿಗ್ರಾಮ ಗಣೇಶ್ ಶೆಣೈ ವಿನಂತಿಸಿದ್ದಾರೆ.

LEAVE A REPLY

Please enter your comment!
Please enter your name here