ದಾವಣಗೆರೆ:ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆ ಮತ್ತು ಮೈಸೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಸಂಯುಕ್ತಾಶ್ರಯದಲ್ಲಿ ಸೆಪ್ಟೆಂಬರ್ ೧೪ ರಂದು ಶನಿವಾರ ಬೆಳಿಗ್ಗೆ ೧೦-೦೦ ಗಂಟೆಗೆ ಮೈಸೂರಿನ ವಿಜಯನಗರ, ೧ನೇ ಹಂತ, ಚಂದ್ರಕಲಾ ಆಸ್ಪತ್ರೆ ಹತ್ತಿರವಿರುವ ಕುವೆಂಪು ಟ್ರಸ್ಟ್ ಕನ್ನಡ ಭವನದಲ್ಲಿ ೨೦೨೪-೨೫ನೇ ಸಾಲಿನ ಸಾರ್ವಜನಿಕ ಶಿಕ್ಷಣ ಇಲಾಖೆಯ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ಧತಾ ಉಚಿತ ಕಾರ್ಯಾಗಾರ ಮತ್ತು ೨೦೨೩-+೨೪ನೇ ಸಾಲಿನ ಎಸ್.ಎಸ್.ಎಲ್.ಸಿ.ಯಲ್ಲಿ ಪ್ರಥಮ ಭಾಷೆ ಕನ್ನಡದಲ್ಲಿ ೧೨೫ಕ್ಕೆ ೧೨೫ ಪರಿಪೂರ್ಣ ಅಂಕ ಪಡೆದ ಮಕ್ಕಳಿಗೆ “ಕನ್ನಡ ಕೌಸ್ತುಭ” ರಾಜ್ಯ ಪ್ರಶಸ್ತಿ ಪ್ರದಾನ ಹಾಗೂ ಉಪಾಧ್ಯಾಯರಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ತಿಳಿಸಿದ್ದಾರೆ.
ಸಮಾರಂಭದ ಉದ್ಘಾಟನೆಯನ್ನು ಮೈಸೂರು ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಎಸ್.ಟಿ. ಜವರೇಗೌಡ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಮೈಸೂರು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಮಡ್ಡೀಕೆರೆ ಗೋಪಾಲ್ ವಹಿಸಿಕೊಳ್ಳಲಿದ್ದಾರೆ. ಕಲಾಕುಂಚದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈಯವರು ಮಕ್ಕಳಿಗೆ ಪರೀಕ್ಷಾ ಪೂರ್ವ ಸಿದ್ಧತೆ ಕುರಿತು ಉಪನ್ಯಾಸ ನೀಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮೈಸೂರು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಉಪಾಧ್ಯಕ್ಷರಾದ ಡಾ|| ಟಿ. ತ್ಯಾಗರಾಜು ಆಗಮಿಸಲಿದ್ದು ಶೈಕ್ಷಣಿಕ ಕಾಳಜಿಯ ಈ ಕಾರ್ಯಕ್ರಮಕ್ಕೆ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳು, ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಕಾರ್ಯಾಗಾರ ಯಶಸ್ವಿಗೊಳಿಸಬೇಕಾಗಿ ಕಲಾಕುಂಚ ಸಮಿತಿ ಸದಸ್ಯರಾದ ಶಿಲ್ಪಾ ಉಮೇಶ್ ವಿನಂತಿಸಿದ್ದಾರೆ.