ದ್ವಿತೀಯ ಪಿಯುಸಿ ಫಲಿತಾಂಶ ಉಡುಪಿ ಜಿಲ್ಲೆ ಪ್ರಥಮ : ಯಶ್ ಪಾಲ್ ಸುವರ್ಣ ಅಭಿನಂದನೆ

0
47

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಶೇ. 96.39 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ಶೈಕ್ಷಣಿಕವಾಗಿ ಅತ್ಯುತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳು ಹಾಗೂ ಶಿಕ್ಷಣ ಇಲಾಖೆಗೆ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅಭಿನಂದನೆ ಸಲ್ಲಿಸಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆಯುವ ಮೂಲಕ ಕರಾವಳಿ ಜಿಲ್ಲೆಯ ಶಿಕ್ಷಣದ ಗುಣಮಟ್ಟವನ್ನು ಮತ್ತೊಮ್ಮೆ ರಾಜ್ಯಮಟ್ಟದಲ್ಲಿ ಸಾಬೀತು ಮಾಡಿದೆ.

ಮಾನ್ಯ ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರು ಉಡುಪಿ ಜಿಲ್ಲೆಯ ನಿರಂತರ ಶೈಕ್ಷಣಿಕ ಸಾಧನೆ ಹಾಗೂ ಗುಣಮಟ್ಟದ ಶಿಕ್ಷಣ ವ್ಯವಸ್ಥೆಗೆ ಇನ್ನೂ ಹೆಚ್ಚಿನ ಶಕ್ತಿ ತುಂಬುವ ನಿಟ್ಟಿನಲ್ಲಿ ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳ ಕಟ್ಟಡ ಹಾಗೂ ಮೂಲ ಸೌಕರ್ಯ ಅಭಿವೃದ್ಧಿಗೆ 25 ಕೋಟಿ ಹಾಗೂ ಪ್ರತಿ ವರ್ಷ ಹೊರ ಜಿಲ್ಲೆಯಿಂದ ಶಿಕ್ಷಣಕ್ಕಾಗಿ ಉಡುಪಿಗೆ ಆಗಮಿಸುವ ಸಾವಿರಾರು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ವಿದ್ಯಾರ್ಥಿ ನಿಲಯಗಳ ನಿರ್ಮಾಣಕ್ಕೆ 25 ಕೋಟಿ ವಿಶೇಷ ಅನುದಾನವನ್ನು ಜಿಲ್ಲೆಗೆ ಮಂಜೂರು ಮಾಡಬೇಕು.

ಜಿಲ್ಲೆಯ ಸರಕಾರಿ ಶಾಲಾ ಕಾಲೇಜುಗಳಲ್ಲಿ ಗಣನೀಯ ಪ್ರಮಾಣದಲ್ಲಿ ಶಿಕ್ಷಕರ ಕೊರತೆಯಿದ್ದರೂ ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಅವಿರತ ಶ್ರಮದ ಮೂಲಕ ಉತ್ತಮ ಫಲಿತಾಂಶ ಬಂದಿದ್ದು, ರಾಜ್ಯ ಸರ್ಕಾರ ತಕ್ಷಣ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಜಿಲ್ಲೆಯ ಶಿಕ್ಷಣ ವ್ಯವಸ್ಥೆಯನ್ನು ಬಲಪಡಿಸಲು ಆದ್ಯತೆ ನೀಡಬೇಕು.

ಉಡುಪಿ ಜಿಲ್ಲೆ ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದ ವಿದ್ಯಾರ್ಥಿಗಳಿಗೆ, ಶಿಕ್ಷಕ ವೃಂದ, ಶಾಲಾಡಳಿತ ಮಂಡಳಿ, ಪೋಷಕರು ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಉಡುಪಿ ಜನತೆಯ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here