ಇಂದೇ ದ್ವಿತೀಯ ಪಿಯುಸಿ ಫಲಿತಾಂಶ

0
89

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (KSEAB) ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದೆ. ರಾಜ್ಯದಾದ್ಯಂತ ಸುಮಾರು 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಬರೆದಿದ್ದ ಪರೀಕ್ಷೆಯ ಫಲಿತಾಂಶ ಮತ್ತು ಅಂಕಪಟ್ಟಿ ಡೌನ್‌ಲೋಡ್ ಮಾಡಲು ಸಮಯ ನಿಗದಿಯಾಗಿದೆ..

ಇಂದು (ಏಪ್ರಿಲ್ 9, 2026) ಇಂದು ಮಧ್ಯಾಹ್ನ ಸಚಿವ ಮಧು ಬಂಗಾರಪ್ಪ ಅವರು ಸುದ್ದಿಗೋಷ್ಠಿ ನಡೆಸಿ ಅಧಿಕೃತವಾಗಿ ಫಲಿತಾಂಶ ಘೋಷಿಸಲಿದ್ದಾರೆ.

ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಇಂದು ಸಂಜೆ 5:00 ಗಂಟೆಯ ನಂತರ ವಿದ್ಯಾರ್ಥಿಗಳು ತಮ್ಮ ‘ಮಾರ್ಕ್ಸ್ ಮೆಮೊ’ ಅಥವಾ ಅಂಕಪಟ್ಟಿಯನ್ನು ವೀಕ್ಷಿಸಬಹುದು ಮತ್ತು ಡೌನ್‌ಲೋಡ್ ಮಾಡಿಕೊಳ್ಳಬಹುದು. karresults.nic.in ಮತ್ತು kseab.karnataka.gov.in ನಲ್ಲಿ ನಿಮ್ಮ ಫಲಿತಾಂಶವನ್ನು ನೋಡಬಹುದು.

ಅಂಕಪಟ್ಟಿ ಡೌನ್‌ಲೋಡ್ ಮಾಡುವುದು ಹೇಗೆ?

ಮೊದಲಿಗೆ ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ನೀಡಿ.

ಮುಖಪುಟದಲ್ಲಿ “2nd PUC Result 2026” ಲಿಂಕ್ ಮೇಲೆ ಕ್ಲಿಕ್ ಮಾಡಿ.

ನಿಮ್ಮ ನೋಂದಣಿ ಸಂಖ್ಯೆ (Registration Number) ಮತ್ತು ವಿಷಯದ ಗುಂಪನ್ನು (Stream – Science/Arts/Commerce) ನಮೂದಿಸಿ.

‘Submit’ ಬಟನ್ ಒತ್ತಿದಾಗ ನಿಮ್ಮ ಫಲಿತಾಂಶ ಪರದೆಯ ಮೇಲೆ ಕಾಣಿಸುತ್ತದೆ.

ನಿಮ್ಮ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.

ಹಿಂದಿನ ವರ್ಷದ ಪಿಯುಸಿ ಫಲಿತಾಂಶಗಳನ್ನು ಏಪ್ರಿಲ್ 8, 2025 ರಂದು ಪ್ರಕಟಿಸಲಾಯಿತು , ಒಟ್ಟಾರೆ ಉತ್ತೀರ್ಣ ಶೇಕಡಾ 73.45%. ಸುಮಾರು 6.37 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 3.4 ಲಕ್ಷ ಮಹಿಳಾ ಅಭ್ಯರ್ಥಿಗಳಲ್ಲಿ ಹುಡುಗಿಯರು ಹುಡುಗರಿಗಿಂತ ಹೆಚ್ಚಿನ ಸಾಧನೆ ಮಾಡಿದ್ದಾರೆ, ಶೇ. 77.8 ರಷ್ಟು ಉತ್ತೀರ್ಣರಾಗಿದ್ದರೆ, 2.9 ಲಕ್ಷ ಪುರುಷ ವಿದ್ಯಾರ್ಥಿಗಳಲ್ಲಿ ಶೇ. 68.2 ರಷ್ಟು ಮಾತ್ರ ಉತ್ತೀರ್ಣರಾಗಿದ್ದಾರೆ.

ಇನ್ನು ಈ ವರ್ಷವೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ನಿರೀಕ್ಷಿತ ಫಲಿತಾಂಶ ಬಾರದ ವಿದ್ಯಾರ್ಥಿಗಳು ಧೃತಿಗೆಡಬೇಕಿಲ್ಲ. ಕರ್ನಾಟಕ ಸರ್ಕಾರವು ಜಾರಿಗೆ ತಂದಿರುವ ಹೊಸ ಮೂರು ಪರೀಕ್ಷೆಗಳ ವ್ಯವಸ್ಥೆಯಡಿ (Exam 1, 2, & 3) ನಿಮಗೆ ಅಂಕ ಸುಧಾರಿಸಿಕೊಳ್ಳಲು ಹಾಗೂ ಅನುತ್ತೀರ್ಣರಾದ ವಿಷಯಗಳನ್ನು ಪಾಸು ಮಾಡಲು ಉತ್ತಮ ಅವಕಾಶವಿದೆ. ಫಲಿತಾಂಶದಲ್ಲಿ ಕಡಿಮೆ ಅಂಕ ಬಂದಿದೆ ಎನಿಸಿದರೆ, ಅಂಕಗಳನ್ನು ಹೆಚ್ಚಿಸಿಕೊಳ್ಳಲು ಈ ಪರೀಕ್ಷೆ ಬರೆಯಬಹುದು. ಎರಡೂ ಪರೀಕ್ಷೆಗಳಲ್ಲಿ ಯಾವುದರಲ್ಲಿ ಹೆಚ್ಚು ಅಂಕ ಬರುತ್ತದೆಯೋ ಅದನ್ನು ಪರಿಗಣಿಸಲಾಗುತ್ತದೆ. ಒಂದು ವೇಳೆ ಪರೀಕ್ಷೆ-2 ರಲ್ಲೂ ಅನುತ್ತೀರ್ಣರಾದರೆ ಅಥವಾ ಅಂಕ ತೃಪ್ತಿ ನೀಡದಿದ್ದರೆ, ಜೂನ್ 2026 ರಲ್ಲಿ ನಡೆಯಲಿರುವ ಪರೀಕ್ಷೆ-3 (Exam 3) ಕ್ಕೆ ಹಾಜರಾಗಲು ಮತ್ತೊಂದು ಅವಕಾಶವಿರುತ್ತದೆ.

LEAVE A REPLY

Please enter your comment!
Please enter your name here