ವಿಟ್ಲ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವ-ಉದ್ಯೋಗ ಕೌಶಲ್ಯ ಅಭಿವೃದ್ಧಿ ತರಬೇತಿ ಶಿಬಿರ

0
41

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ವಿಟ್ಲ ವತಿಯಿಂದ ತಾಲೂಕಿನ ಸ್ವ- ಉದ್ಯೋಗ ಕೌಶಲ್ಯ ಅಭಿವೃದ್ಧಿ ತರಬೇತಿ ಶಿಬಿರ ಡಿಸೆಂಬರ್ 30 ನೇ ಮಂಗಳವಾರ ವಿಟ್ಲ ಯೋಜನಾ ಕಚೇರಿಯಲ್ಲಿ ನಡೆಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದಕ್ಷಿಣ ಕನ್ನಡ ಜಿಲ್ಲೆ-2 ರ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ಮಾತನಾಡಿ ಸ್ವ ಉದ್ಯೋಗ ತರಬೇತಿಯಲ್ಲಿ ಭಾಗವಹಿಸಿದ ಫಲಾನುಭವಿಗಳು ಈ ತರಬೇತಿಯ ಪ್ರಯೋಜನ ಪಡೆದು ಸ್ವ – ಉದ್ಯೋಗ ಪ್ರಾರಂಭಿಸಿ ಸ್ವಾವಲಂಬಿಗಳಾಗಿ ಎಂದು ಶುಭ ಹಾರೈಸಿದರು.

ಉಜಿರೆ ರುಡ್ ಸೆಟ್ ಸಂಸ್ಥೆ ಉಪನ್ಯಾಸಕರಾದ ಕರುಣಾಕರವರು ಸ್ವ ಉದ್ಯೋಗ ಮಾಡಲು ಇರುವ ಅವಕಾಶ ಗಳ ಬಗ್ಗೆ, ವ್ಯವಹಾರದ ಬಗ್ಗೆ ಹಾಗೂ ಮಾರುಕಟ್ಟೆಯ ಬಗ್ಗೆ ಮಾಹಿತಿಯೊಂದಿಗೆ ರುಡ್ ಸೆಟ್ ಸಂಸ್ಥೆ ನೀಡುವ ತರಬೇತಿ, ತರಬೇತಿ ಪಡೆಯಲು ಬೇಕಾದ ಮಾನದಂಡಗಳು ಮತ್ತು ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ಗ್ರಾಮಾಭಿವೃದ್ಧಿ ಯೋಜನೆಯ ಕೇಂದ್ರ ಕಚೇರಿಯ ಸಿಡ್ಬಿ ವಿಭಾಗದ ಯೋಜನಾಧಿಕಾರಿ ಅನುಷಾ ಶೆಟ್ಟಿಯವರು ಸ್ವ ಉದ್ಯೋಗ ಮಾಡಲು ಬೇಕಾದ ಆರ್ಥಿಕ ವ್ಯವಸ್ಥೆಗೆ ಪೂರಕವಾದ ಯೋಜನೆಯ ಸಿಡ್ಬಿ ಸಾಲ ಪಡೆಯಲು ಬೇಕಾದ ಅರ್ಹತೆ ಗಳು, ನೀಡಬೇಕಾದ ದಾಖಲಾತಿಗಳ ಬಗ್ಗೆ, ಮರುಪಾವತಿ ಬಗ್ಗೆ ಮಾಹಿತಿ ನೀಡಿದರು. ವಿಟ್ಲ ತಾಲೂಕು ಯೋಜನಾಧಿಕಾರಿ ಸುರೇಶ್ ಗೌಡ ಸ್ವಾಗತಿಸಿ, ಕಚೇರಿ ಸಹಾಯಕಿ ಮಮತಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here