ಬ್ರಹ್ಮಾವರದಲ್ಲಿ ಸ್ವಯಂ ಉದ್ಯೋಗ ತರಬೇತಿ

0
11

ಜಾಯಿಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಹಾಗೂ ಜಾಯಿಂಟ್ಸ್ ಕೇರ್ ಫೌಂಡೇಶನ್ (ರಿ) ಇವರ ಸಂಯುಕ್ತ ಆಶ್ರಯದಲ್ಲಿ, ಆಸರೆ ರುಡ್ಸೆಟ್ ಸಂಸ್ಥೆ, ಬ್ರಹ್ಮಾವರದಲ್ಲಿ ಸ್ವಯಂ ಉದ್ಯೋಗ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಅಣ್ಣಯ್ಯ ದಾಸ್, ಅಧ್ಯಕ್ಷರು ಜಯಿಂಟ್ಸ್ ಬ್ರಹ್ಮಾವರ ಮತ್ತು Dr ಬೊಮ್ಮಯ್ಯ, ನಿರ್ದೇಶಕರು, RUDSET ಸಂಸ್ಥೆ ಬ್ರಹ್ಮಾವರ ಇವರು ವಹಿಸಿದ್ದರು.

ಕಾರ್ಯಕ್ರಮವನ್ನು ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ತಮ್ಮ ಉದ್ಘಾಟನಾ ಭಾಷಣದಲ್ಲಿ ಸಮಾಜದಲ್ಲಿ ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಳ್ಳುವ ಮಹತ್ವ, ಶಿಸ್ತು, ಸೇವಾ ಮನೋಭಾವ ಹಾಗೂ ಜೀವನ ಮೌಲ್ಯಗಳ ಕುರಿತು ಅನೇಕ ಉದಾಹರಣೆಗಳೊಂದಿಗೆ ಪ್ರೇರಣಾದಾಯಕ ಸಂದೇಶವನ್ನು ನೀಡಿದರು.

ಸಿ.ಎಸ್.ಐ. ಲೊಂಬಾರ್ಡ್ ಮೆಮೋರಿಯಲ್ ಮಿಷನ್ ಆಸ್ಪತ್ರೆ, ಉಡುಪಿಯ ವೈದ್ಯಾಧಿಕಾರಿಗಳು ಹಾಗೂ ವೈದ್ಯಕೀಯ ತಂಡವು ಆರೋಗ್ಯ ತಪಾಸಣೆಯನ್ನು ಅತ್ಯಂತ ವ್ಯವಸ್ಥಿತವಾಗಿ ನಡೆಸಿಕೊಟ್ಟರು. ಈ ಶಿಬಿರದಲ್ಲಿ ಸುಮಾರು 85 ಮಂದಿ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಆರೋಗ್ಯ ತಪಾಸಣೆಯ ಸದುಪಯೋಗವನ್ನು ಪಡೆದರು.