Saturday, May 24, 2025
Homeನಿಧನಬಿಜೆಪಿಯ ಹಿರಿಯ ನಾಯಕ ಎಂ.ಬಿ. ಭಾನುಪ್ರಕಾಶ್ ನಿಧನ

ಬಿಜೆಪಿಯ ಹಿರಿಯ ನಾಯಕ ಎಂ.ಬಿ. ಭಾನುಪ್ರಕಾಶ್ ನಿಧನ

ಬಿಜೆಪಿಯ ಹಿರಿಯ ನಾಯಕ, ಮಾಜಿ ಎಂಎಲ್ ಸಿ ಎಂಬಿ ಭಾನುಪ್ರಕಾಶ್, ಹೃದಯಾಘಾತದಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಶಿವಮೊಗ್ಗ ತಾಲೂಕಿನ ಮತ್ತೂರು ಗ್ರಾಮದ ಎಂ ಬಿ ಭಾನುಪ್ರಕಾಶ್ ಬಿಜೆಪಿ ಸಂಘಟನೆಯಲ್ಲಿ ಹಲವಾರು ಹುದ್ದೆಗಳನ್ನು ನಿರ್ವಹಿಸಿದ್ದರು.
ಶಿವಮೊಗ್ಗ ಜಿಲ್ಲೆಯ ಮತ್ತೂರಿನವರಾದ ಭಾನುಪ್ರಕಾಶ್ ನಳಿನ್ ಕುಮಾರ್ ಕಟೀಲ್ ರಾಜ್ಯ ಬಿಜೆಪಿ ಅಧ್ಯಕ್ಷರಾಗಿದ್ದ ಸಮಯದಲ್ಲಿ 2019ರಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಕೂಡ ಕರ್ತವ್ಯ ನಿರ್ವಹಿಸಿದ್ದರು. ಭಾನುಪ್ರಕಾಶ್ ಬಿಜೆಪಿಯ ಹಿರಿಯ ಮುಖಂಡ. ಸರಳ, ಸಜ್ಜನ ಎಂಬ ಹೆಗ್ಗಳಿಕೆ. ಸತ್ಯ, ನ್ಯಾಯ, ನಿಷ್ಠೆಯ ಪರವಾಗಿ ಮಾತನಾಡುವ ಉತ್ತಮ ವಾಗ್ಮಿ. ಗಾಜನೂರು ಜಿ.ಪಂ. ಕ್ಷೇತ್ರದಿಂದ ಆಯ್ಕೆಯಾಗಿದ್ದ ಭಾನುಪ್ರಕಾಶ್ 2001ರಿಂದ 2005ರ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದರು. ಬಳಿಕ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ(RSS) ಕಟ್ಟಾ ಅನುಯಾಯಿಯಾಗಿದ್ದ ಭಾನುಪ್ರಕಾಶ್, ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪ ಬಿಜೆಪಿ ತೊರೆದು ಸಮಾಜವಾದಿ ಪಕ್ಷದಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಸ್ಪರ್ಧಿಸಿದ್ದಾಗ ಬಿಜೆಪಿಯಿಂದ ಬಂಗಾರಪ್ಪ ಎದುರು ನಿಂತಿದ್ದರು. ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿ ಪಕ್ಷ ಕಟ್ಟುವಲ್ಲಿ ಶ್ರಮಿಸಿದವರು.
ಈ ಹಿಂದೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು ಬಿಜೆಪಿ ರಾಜ್ಯಾಧ್ಯಕ್ಷರಿದ್ದಾಗ ಕೂಡ ಇವರಿಗೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಸ್ಥಾನ ನೀಡಲಾಗಿತ್ತು. ಆದರೆ ಬಿಎಸ್ವೈ ಅವರ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಭಾನುಪ್ರಕಾಶ್ ಬಿಜೆಪಿ ಉಪಾಧ್ಯಕ್ಷ ಸ್ಥಾನವನ್ನು ಒಪ್ಪಿಕೊಳ್ಳುವುದಿಲ್ಲ. ಬಿಜೆಪಿ ಸಾಮಾನ್ಯ ಕಾರ್ಯಕರ್ತನಾಗಿಯೇ ಉಳಿಯುತ್ತೇನೆ ಎಂದಿದ್ದರು.

RELATED ARTICLES
- Advertisment -
Google search engine

Most Popular