ದಾವಣಗೆರೆ : ಚಿತ್ರದುರ್ಗ ಜಿಲ್ಲೆಯ ಭರಮಸಾಗರದ ಪವಮಾನ ಪ್ರತಿಷ್ಠಾನದ ಆಶ್ರಯದಲ್ಲಿ ಏ. 25 ರಂದು ಶನಿವಾರ ಸಂಜೆ 5 ಗಂಟೆಗೆ ಭರಮಸಾಗರದ ವಾಣಿ ನಿವಾಸ ಸಭಾಂಗಣದಲ್ಲಿ ಬಸವ ಜಯಂತಿ ಪ್ರಯುಕ್ತ ಹಿರಿಯ ದಂಪತಿಗಳಿಗೆ ಗೌರವ ಸಮರ್ಪಣೆಯೊಂದಿಗೆ ಸನ್ಮಾನಿಸಲಾಗುವುದೆಂದು ಸಂಸ್ಥೆಯ ಅಧ್ಯಕ್ಷರಾದ ಜಯಮ್ಮ ಜಯರಾವ್ ತಿಳಿಸಿದ್ದಾರೆ.
ಸಮಾರಂಭದ ಉದ್ಘಾಟನೆಯನ್ನು ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್‌ಶೆಣೈ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷರಾದ ಹೆಚ್.ಎಂ.ತಿಪ್ಪೇಸ್ವಾಮಿಯವರು ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ದಾವಣಗೆರೆಯ ವೃತ್ತಿರಂಗಭೂಮಿ ನಿರ್ದೇಶಕರಾದ ಮಲ್ಲಿಕಾರ್ಜುನ ಕಡಕೋಳ ಆಗಮಿಸಲಿದ್ದಾರೆ. ಗೌರವ ಉಪಸ್ಥಿತರಾದ ಭರಮಸಾಗರದ ಡಿವಿಎಸ್ ವಿದ್ಯಾಸಂಸ್ಥೆಯ ಮುಖ್ಯಸ್ಥರಾದ ಡಿ.ಎಸ್.ಪ್ರವೀಣ್‌ಕುಮಾರ್, ಬೆಂಗಳೂರಿನ ಜ್ಯೋತಿಷ್ಯ ಮತ್ತು ವಾಸ್ತು ಸಲಹೆಗಾರರಾದ ಮಾಲತಿ ವಿಠಲ್‌ರವರು ಉಪಸ್ಥಿತರಿರುತ್ತಾರೆ.
ಈ ಅಪರೂಪದ ಹಿರಿಯ ಚೇತನ ದಂಪತಿಗಳಿಗೆ ಗೌರವ ಸಮರ್ಪಣೆ ಸಮಾರಂಭಕೆ ಸಾರ್ವಜಮಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಕಾರ್ಯಕ್ರಮ ಯಶಸ್ವಿಗೊಳಿಸಬೇಕಾಗಿ ಪ್ರತಿಷ್ಠಾನದ ಪ್ರಧಾನ ಕಾರ್ಯದರ್ಶಿ ವಿಜಯಲಕ್ಷ್ಮೀ ಅನಂತಪದ್ಮನಾಭರಾವ್ ವಿನಂತಿಸಿದ್ದಾರೆ.

