ಮುಲ್ಕಿ: ಕನ್ನಡ ಸಾಹಿತ್ಯ ಲೋಕದ ಹಿರಿಯ ಲೇಖಕಿ ಹಾಗೂ ಸಾಹಿತಿ ಡಾ. ಕಮಲಾ !ಹಂಪನಾ ನಿಧನಕ್ಕೆ ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಆಧ್ಯಾತ್ಮಿಕ ಗುರು ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಅವರು ಮಾಧ್ಯಮದ ಜೊತೆ ಮಾತನಾಡಿ ಡಾ. ಕಮಲಾ ಹಂಪನಾ ಕನ್ನಡ ಸಾಹಿತ್ಯಲೋಕಕ್ಕೆ ಅಮೂಲ್ಯ ಕೊಡುಗೆ ನೀಡಿದ್ದರು. ಉತ್ತಮ ವಾಗ್ಮಿಯಾಗಿದ್ದ ಅವರು ಮಹಿಳೆಯರ ಸಾಹಿತ್ಯದ ಧ್ವನಿಯಾಗಿದ್ದರು ಎಂದು ಹೇಳಿದ್ದಾರೆ.
ಹಿರಿಯ ಸಾಹಿತಿ ಡಾ. ಕಮಲ ಹಂಪನಾ ನಿಧನಕ್ಕೆ ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು,ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಸಚಿವ ಅಭಯಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ, ಕಸಾಪ ಮಾಜೀ ರಾಜ್ಯಾಧ್ಯಕ್ಷ ಡಾ. ಹರಿಕೃಷ್ಣ ಪುನರೂರು
ಉದ್ಯಮಿ ಅರವಿಂದ ಪೂಂಜಾ ಕಾರ್ನಾಡ್, ಯುಗಪುರುಷ ಸಂಪಾದಕ ಭುವನಾಭಿರಾಮ ಉಡುಪ, ಹೊಸಅಂಗಣ ಮಾಸಪತ್ರಿಕೆಯ ಸಂಪಾದಕ ಡಾ. ಹರಿಶ್ಚಂದ್ರ ಪಿ ಸಾಲ್ಯಾನ್, ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ಪ್ರಕಾಶ್ ಸುವರ್ಣ, ಮಾಜಿ ಅಧ್ಯಕ್ಷ ಗೋಪಿನಾಥ ಪಡಂಗ, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು, ಗೌತಮ್ ಜೈನ್ ಮುಲ್ಕಿ ಅರಮನೆ, ಬಪ್ಪನಾಡು ಲಯನ್ಸ್ ಕ್ಲಬ್ ಇನ್ಸ್ಪೈರ್ ಸ್ಥಾಪಕ ಅಧ್ಯಕ್ಷ ವೆಂಕಟೇಶ್ ಹೆಬ್ಬಾರ್, ಉದಯಕುಮಾರ್ ಶೆಟ್ಟಿ ಅಧಿಧನ್ ಮುಲ್ಕಿ, ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.