ಮಂಗಳೂರು: ತುಳುನಾಡಿನ ಹುಲಿ ವೇಷ ಸಂಸ್ಕೃತಿಯ ಸರದಾರ ಬಜಿಲಕೇರಿ ಕಮಲಾಕ್ಷ ಅವರಿಗೆ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಚಾವಡಿ ತಮ್ಮನ ಗೌರವ ಸಮರ್ಪಣೆಯ ಕಾರ್ಯಕ್ರಮ ಸೆ. 29ರಂದು ಸಂಜೆ 4:00 ಗಂಟೆಗೆ ಮಂಗಳೂರಿನ ಮಣ್ಣಗುಡ್ಡೆಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಲಿದೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಮಣ್ಣಗುಡ್ಡೆ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಚಾವಡಿ ತಮ್ಮನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಳು ಅಕಾಡೆಮಿಯ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ವಹಿಸುವರು. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಿ. ವೇದವ್ಯಾಸ ಕಾಮತ್, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಮಮತಾ ಡಿ .ಎಸ್ ಗಟ್ಟಿ, ಪಿಲಿನಲಿಕೆ ಸಂಘಟಕರಾದ ಮಿಥುನ್ ರೈ, ಬರ್ಕೆ ಫ್ರೆಂಡ್ಸ್ ಸ್ಥಾಪಕಾಧ್ಯಕ್ಷ ಯಜ್ಞೇಶ್ವರ ಬರ್ಕೆ, ದಕ್ಷಿಣ ಕನ್ನಡ ಜಿಲ್ಲಾ ಬ್ಯಾಡ್ಮಿಂಟನ್ ಅಸೋಸಿಯೇಶನ್ ಅಧ್ಯಕ್ಷ ಸಂತೋಷ್ ಶೆಟ್ಟಿ, ಮಣ್ಣಗುಡ್ಡೆ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಗಣೇಶ್ ಕುಮಾರ್ ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು.
ಎಚ್ .ಎಮ್ .ಎಸ್ ಮುಖಂಡ ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸುರೇಶ್ಚಂದ್ರ ಶೆಟ್ಟಿ ಸನ್ಮಾನ ನಡೆಸುವರು. ಸಾಮಾಜಿಕ ಕಾರ್ಯಕರ್ತ ಎಂ .ಜಿ. ಹೆಗ್ಡೆ ಅಭಿನಂದನಾ ಮಾತುಗಳನ್ನಾಡುವರು.
ಕಾರ್ಯಕ್ರಮದಲ್ಲಿ ಹಳೆ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ರಾಜೇಶ್ ಶೆಟ್ಟಿ ಉಪಸ್ಥಿತರಿರುವರು ಎಂದು ತುಳು ಅಕಾಡೆಮಿ ಪ್ರಕಟಣೆ ತಿಳಿಸಿದೆ.

