ಉಜಿರೆ: ದಕ್ಷಿಣಕನ್ನಡ ಜಿಲ್ಲಾ ಮಟ್ಟದ ಹಾಗೂ ಬೆಳ್ತಂಗಡಿ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ನಾಳೆ ಶುಕ್ರವಾರ ಪೂರ್ವಾಹ್ನ ಹತ್ತು ಗಂಟೆಯಿಂದ ಬೆಳ್ತಂಗಡಿಯಲ್ಲಿ ಶ್ರೀ ಮಂಜುನಾಥ ಸ್ವಾಮಿ ಕಲಾಭವನದಲ್ಲಿ ನಡೆಯಲಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ತಿಳಿಸಿದ್ದಾರೆ.
ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮ ಉದ್ಘಾಟಿಸುವರು.
ಶಾಸಕ ಹರೀಶ್ ಪೂಂಜ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ದಕ್ಷಿಣಕನ್ನಡ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭವೂ ನಡೆಯಲಿದೆ. ನಿವೃತ್ತ ಶಿಕ್ಷಕರನ್ನೂ ಗೌರವಿಸಲಾಗುವುದು.