ಸೆ. 7; ಮಣಿಪುರದಲ್ಲಿ ನಾರಾಯಣ ಗುರು ಜಯಂತಿ ಕಾರ್ಯಕ್ರಮ

0
175

ಮಣಿಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಧರ್ಮ ಪರಿಪಾಲನ ಸಂಘ ಮಣಿಪುರ ಸಹಕಾರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮವು ಸೆ. 7ರಂದು ಬೆಳಿಗ್ಗೆ 10 ಗಂಟೆಯಿಂದ ಮಣಿಪುರ ನಾರಾಯಣ ಗುರು ಸಭಾಭವನದಲ್ಲಿ ನಡೆಯಲಿದೆ.

ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಕಾರ್ಯಕ್ರಮ ಉದ್ಘಾಟಿಸಲಿದ್ದು, ಸಚಿವ ಶಿವರಾಜ ಎಸ್.‌ ತಂಗಡಗಿ, ಸಂಸದ ಕೋಟ ಶ್ರೀನಿವಾಸ ಪೂಜಾರಿ, ಬಿ.ವೈ. ರಾಘವೇಂದ್ರ, ಶಾಸಕರುಗಳಾದ ಸುನೀಲ್‌ ಕುಮಾರ್‌, ಎಸ್.‌ ಎಲ್‌ ಭೋಜೇಗೌಡ, ಯಶ್‌ ಪಾಲ್‌ ಸುವರ್ಣ, ಗುರುರಾಜ್‌ ಶೆಟ್ಟಿ ಗಂಟಿಹೊಳೆ, ಕಿರಣ್‌ ಕುಮಾರ್‌ ಕೊಡ್ಗಿ, ಮಂಜುನಾಥ ಭಂಡಾರಿ, ಡಾ. ಧನಂಜಯ ಸರ್ಜಿ, ಕಿಶೋರ್‌ ಕುಮಾರ್‌ ಸೇರಿದಂತೆ ಹಲವು ಜನಪ್ರತಿನಿಧಿಗಳು., ಅಧಿಕಾರಿಗಳು ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here